Home News Lucknow: ದೇವಸ್ಥಾನದ ಆವರಣದಲ್ಲಿ ನಮಾಜ್‌ ಮಾಡಿದ ವ್ಯಕ್ತಿ; ವಿಡಿಯೋ ವೈರಲ್‌, ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

Lucknow: ದೇವಸ್ಥಾನದ ಆವರಣದಲ್ಲಿ ನಮಾಜ್‌ ಮಾಡಿದ ವ್ಯಕ್ತಿ; ವಿಡಿಯೋ ವೈರಲ್‌, ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

Hindu neighbor gifts plot of land

Hindu neighbour gifts land to Muslim journalist

Lucknow: ಸಾಮಾಜಿಕ ಜಾಲತಾಣದಲ್ಲಿ ಯುವಕನೊಬ್ಬ ದೇವಸ್ಥಾನದ ಆವರಣದಲ್ಲಿ ನಮಾಜ್‌ ಮಾಡಿರುವ ವಿಡಿಯೋ ವೈರಲ್‌ ಆಗಿದೆ. ವಿಡಿಯೋ ವೈರಲ್‌ ಬೆನ್ನಲ್ಲೇ ಅಲ್ಲಿನ ಹಿಂದೂಗಳ ಆಕ್ರೋಶಕ್ಕೆ ಕಾರಣವಾಗಿದೆ. ಜನರು ಶಾಂತಿ ಕಾಪಾಡಬೇಕು ಎಂದು ಪೊಲೀಸರು ಈಗಾಗಲೇ ಮನವಿ ಮಾಡಿದ್ದು, ಮುಂಜಾಗ್ರತ ಕ್ರಮವಾಗಿ ಗ್ರಾಮದಲ್ಲಿ ನಿಯೋಜನೆ ಮಾಡಲಾಗಿದೆ.

ವಿಡಿಯೋ ವೈರಲ್‌ ಆದ ಬೆನ್ನಲ್ಲೇ ದೇವಸ್ಥಾನದ ಆವರಣದಲ್ಲಿ ನಮಾಜ್‌ ಮಾಡಿರುವ ಯುವಕನನ್ನು ಬಂಧನ ಮಾಡಲಾಗಿದೆ. ಅಲಿ ಹಸನ್‌ ಮೊಹಮ್ಮದ್‌ ಬಂಧಿತ ಆರೋಪಿ. ದತಗಂಜ್‌ ಪೊಲೀಸ್‌ ಠಾಣೆ ವ್ಯಾಪ್ತಿಯ ಪಾಪಡ್‌ ಗ್ರಾಮದಲ್ಲಿರುವ ಬ್ರಹ್ಮದೇವ್‌ ದೇವಸ್ಥಾನದ ಆವರಣದಲ್ಲಿ ಈ ಘಟನೆ ನಡೆದಿದೆ. ವಿಡಿಯೋ ವೈರಲ್‌ ಬೆನ್ನಲ್ಲೇ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದೆ. ದೇವಸ್ಥಾನದ ಆವರಣದಲ್ಲಿ ನಮಾಜ್‌ ಮಾಡಿರುವ ಯುವಕನನ್ನು ಬಂಧನ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಸನ್‌ ಅಲಿ ಮೊಹಮ್ಮದ್‌ ಸುಮಾರು 25-30 ವರ್ಷಗಳಿಂದ ದೇವಾಲಯದ ಆವರಣದಲ್ಲಿ ವಾಸ ಮಾಡುತ್ತಿದ್ದು, ದೇವಾಲಯ ಮತ್ತು ಗೋಸೇವೆಯನ್ನು ಸ್ವಚ್ಛಗೊಳಿಸುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ಅಲ್ಲಿನ ಸ್ಥಳೀಯರು ಹೇಳಿದ್ದಾರೆ.

ಇದನ್ನೂ ಓದಿ:Bengaluru: ಕಾಡು ಪ್ರಾಣಿಗಳನ್ನು ಬೇಟೆಯಾಡಿದವರ ಬಂಧನ