Dakshina kannada: ಮರಳು, ಕೆಂಪುಕಲ್ಲು ಗಣಿಗಾರಿಕೆಗೆ ಕಾನೂನು ರೀತಿಯಲ್ಲಿ ಅವಕಾಶ: ದಿನೇಶ್ ಗುಂಡೂರಾವ್!

Share the Article

Dakshina kannada: ದಕ್ಷಿಣ ಕನ್ನಡ (Dakshina kannada) ಜಿಲ್ಲಾ ಪಂಚಾಯತಿಯ ನೇತ್ರಾವತಿ ಸಭಾಂಗಣದಲ್ಲಿ ಸೋಮವಾರ ನಡೆದ ಕೆಡಿಪಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ ದಿನೇಶ್ ಗುಂಡೂರಾವ್ ಮಾತನಾಡಿ,

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ಥಗಿತವಾಗಿರುವ ಕೆಂಪು ಕಲ್ಲು ಗಣಿಗಾರಿಕೆ ಮತ್ತು ಮರಳುಗಾರಿಕೆಗೆ ಸಂಬಂಧಿಸಿದಂತೆ ಕಾನೂನು ಕ್ರಮಕ್ಕೆ ಮುಂದಿನ ವಾರ ಬೆಂಗಳೂರಿನಲ್ಲಿ ಉನ್ನತ ಮಟ್ಟದ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಸಭೆಯ ಆರಂಭದಲ್ಲಿ ಶಾಸಕರು, ಜಿಲ್ಲೆಯಲ್ಲಿ ಮನೆ ನಿರ್ಮಾಣ ಸೇರಿದಂತೆ ಬಡ ಕೂಲಿ ಕಾರ್ಮಿಕರಿಗೆ ಸಮಸ್ಯೆಯಾಗಿರುವ ಕುರಿತು ಪ್ರಸ್ತಾಪಿಸಿ ಸಕ್ರಮ ಮರಳು ಗಣಿಗಾರಿಕೆ ಮತ್ತು ಕೆಂಪು ಕಲ್ಲು ತೆಗೆಯಲು ಅವಕಾಶ ನೀಡುವಂತೆ ಒತ್ತಾಯಿಸಿದಾಗ ಸಚಿವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: Heart Attack: ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣ – ಹೃದಯಾಘಾತಕ್ಕೆ ಕೋವಿಡ್ ಕಾರಣನಾ? ಶೀಘ್ರದಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಕೆ

Comments are closed.