Crime: ಬ್ರಹ್ಮಾವರ: ಹಸು ರುಂಡ ಪತ್ತೆ ಪ್ರಕರಣ: ಆರು ಮಂದಿ ಆರೋಪಿಗಳ ಬಂಧನ!

Crime: ಜೂ. 28ರಂದು ರಾತ್ರಿ ಸುಮಾರು 11.30ಕ್ಕೆ ಆರೂರು ಗ್ರಾಮದ ಕುಂಜಾಲು ಜಂಕ್ಷನ್ ಬಳಿಯ ರಿಕ್ಷಾ ನಿಲ್ದಾಣದ ಎದುರು ಮುಖ್ಯ ರಸ್ತೆಯ ಮಧ್ಯೆ ಗೋವಿನ ತಲೆ ಮತ್ತು ಚರ್ಮ ಕಂಡು ಬಂದಿತ್ತು. ಪ್ರಕರಣ ದಾಖಲಿಸಿಕೊಂಡ ಬ್ರಹ್ಮಾವರ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಒಟ್ಟು 4 ತಂಡಗಳನ್ನು ರಚಿಸಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ್ದರು. ಸಿಸಿಟಿವಿ ಹಾಗೂ ವಾಹನಗಳ ಚಲನೆಯ ಆಧಾರದ ಮೇಲೆ ತನಿಖೆ ನಡೆಸಿ ಆರು ಮಂದಿಯನ್ನು ಬಂಧಿಸಲಾಗಿದೆ.

ರಾಮ ಕುಂಜಾಲು (49), ಪ್ರಸಾದ್ ಕುಂಜಾಲು (21), ನವೀನ್ ಮಟಪಾಡಿ (35), ಕೇಶವ ನಾಯ್ಕ ಅಡಿjಲ (50), ಸಂದೇಶ ಕುಂಜಾಲು (35) ಮತ್ತು ರಾಜೇಶ್ ಕುಂಜಾಲು (28) ಬಂಧಿತರು. 7ನೇ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪೊಲೀಸರು 6 ಮಂದಿ ಆರೋಪಿಗಳನ್ನು ಸೋಮವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
Comments are closed.