Belthangady: ಬೆಳ್ತಂಗಡಿಯಲ್ಲಿ ಹೃದಯಾಘಾತಕ್ಕೊಳಗಾಗಿ ವ್ಯಕ್ತಿ ಸಾವು

Belthangady: ವ್ಯಕ್ತಿಯೊಬ್ಬರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡ ಪರಿಣಾಮ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಸಾವಿಗೀಡಾದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಕಲ್ಲಾಜೆ ಗಂಪದಕೋಡಿ ನಿವಾಸಿ ವಜ್ರಾಕ್ಷ ಪೂಜಾರಿ (53) ಎಂಬುವವರಿಗೆ ಜೂ.30 ರ ರಾತ್ರಿ ಎದೆನೋವು ಕಾಣಿಸಿದೆ.

ನಂತರ ತನ್ನ ಸ್ಕೂಟರ್‌ನಲ್ಲಿ ಉಜಿರೆ ಖಾಸಗಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಮುಂದಾದಾಗ ಸಾವಿಗೀಡಾಗಿರುವ ಘಟನೆ ನಡೆದಿದೆ.
ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದ ವಜ್ರಾಕ್ಷ ಪೂಜಾರಿ ಅವರು ಆರೋಗ್ಯವಾಗಿಯೇ ಇದ್ದರು. ಆದರೆ ಸಂಜೆ ಮನೆಗೆ ಬಂದಾಗ ಇದ್ದಕ್ಕಿದ್ದಂತೆ ಎದೆನೋವು ಪ್ರಾರಂಭವಾಗಿದೆ.
Comments are closed.