Home News Bengaluru: ವಾಲ್ಮೀಕಿ ನಿಗಮ ಹಗರಣ ತನಿಖೆ ಸಿಬಿಐಗೆ ನೀಡಿ ಹೈಕೋರ್ಟ್ ಆದೇಶ!

Bengaluru: ವಾಲ್ಮೀಕಿ ನಿಗಮ ಹಗರಣ ತನಿಖೆ ಸಿಬಿಐಗೆ ನೀಡಿ ಹೈಕೋರ್ಟ್ ಆದೇಶ!

Hindu neighbor gifts plot of land

Hindu neighbour gifts land to Muslim journalist

Bengaluru: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ಹೈಕೋರ್ಟ್ ಮಂಗಳವಾರ ಮಹತ್ವದ ಆದೇಶ ನೀಡಿದೆ.

ಸಿಬಿಐ ಈವರೆಗೆ ಬ್ಯಾಂಕ್ ವಿಚಾರಕ್ಕೆ ಸೀಮಿತವಾಗಿ ತನಿಖೆ ನಡೆಸುತ್ತಿತ್ತು. ಸಿಬಿಐನಿಂದ ಪ್ರಕರಣದ ತನಿಖೆ ಸಮಗ್ರ ತನಿಖೆ ಕೋರಿ ಶಾಸಕರಾದ ಬಸನಗೌಡ ಪಾಟೀಲ್‌ ಯತ್ನಾಳ್‌, ರಮೇಶ ಜಾರಕಿಹೊಳಿ, ಮಾಜಿ ಶಾಸಕರಾದ ಅರವಿಂದ ಲಿಂಬಾವಳಿ ಮತ್ತು ಕುಮಾ‌ರ್ ಬಂಗಾರಪ್ಪ ಅವರು ರಿಟ್ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ತೀರ್ಪು ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸಿದ ಹೈಕೋರ್ಟ್‌, ವಿಶೇಷ ತನಿಖಾ ತಂಡದ(SIT) ತನಿಖೆಯನ್ನು ರದ್ದುಗೊಳಿಸಿ, ಪ್ರಕರಣದ ಸಮಗ್ರ ತನಿಖೆಗೆ ನಡೆಸುವಂತೆ ಸಿಬಿಐಗೆ ಸೂಚಿಸಿದೆ. ಅಲ್ಲದೇ ಎಸ್‌ಐಟಿ ಸಂಗ್ರಹಿಸಿದ ಎಲ್ಲಾ ದಾಖಲೆಗಳನ್ನು ಸಿಬಿಐಗೆ ವರ್ಗಾಯಿಸುವಂತೆ ಆದೇಶಿಸಿದೆ.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಯೂನಿಯನ್‌ ಬ್ಯಾಂಕ್‌ ಆಫ್ ಇಂಡಿಯಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಈ ಪ್ರಕರಣದಲ್ಲಿ ಹಣ ದುರುಪಯೋಗದ ಆರೋಪಗಳಿದ್ದು, ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಯೂನಿಯನ್ ಬ್ಯಾಂಕ್‌ ಆಫ್‌ ಇಂಡಿಯಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಈ ಪ್ರಕರಣದಲ್ಲಿ ಹಣ ದುರುಪಯೋಗದ ಆರೋಪಗಳಿದ್ದು, ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಬ್ಯಾಂಕ್‌ ಮನವಿ ಮಾಡಿತ್ತು. ಆದರೆ, ಹೈಕೋರ್ಟ್‌ ಈ ಮನವಿಯನ್ನು ತಿರಸ್ಕರಿಸಿತ್ತು. ಈಗ ಹೈಕೋರ್ಟ್‌ ಪ್ರಕರಣವನ್ನು ಸಿಬಿಐಗೆ ವಹಿಸಿದ್ದು, ಮಾಜಿ ಸಚಿವ ಬಿ.ನಾಗೇಂದ್ರ ಸೇರಿದಂತೆ ಹಲವರಿಗೆ ಢವ ಢವ ಶುರುವಾಗಿದೆ.

ಇದನ್ನೂ ಓದಿ: Siddaramaiah: ದ್ವೇಷ ಭಾಷಣ, ನಕಲಿ ಸುದ್ದಿಗಳ ವಿರುದ್ಧ ಸ್ವಯಂಪ್ರೇರಿತ FIR ದಾಖಲಿಸಿ: ಪೊಲೀಸರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ!