Online geam: ಆನ್ ಲೈನ್ ಗೇಮ್ ನಲ್ಲಿ ಲಕ್ಷ ಲಕ್ಷ ಕಳೆದುಕೊಂಡ ಯುವಕ: ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣು!

Online geam: ಆನ್ ಲೈನ್ ಗೇಮ್ ಚಟಕ್ಕೆ ಬಿದ್ದು ಲಕ್ಷ ಲಕ್ಷ ಹಣ ಕಳೆದುಕೊಂಡ ಯುವಕ ಸೆಲ್ಫಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ಶಿವಕುಮಾರ್ ಆತ್ಮಹತ್ಯೆಗೆ ಶರಣಾಗಿರುವ ಯುವಕ. ದಾವಣಗೆರೆ ಜಿಲ್ಲೆಯ ಸರಸ್ವತಿ ನಗರದ ನಿವಾಸಿಯಾಗಿದ್ದ ಯುವಕ CROWN-246 ಎಂಬ ಆನ್ ಲೈನ್ ಗೇಮ್ (Online geam) ಆಡಿ 3 ಲಕ್ಷ ರೂಪಾಯಿ ಹಣ ಕಳೆದುಕೊಂಡಿದ್ದ.
ಈ ಬಗ್ಗೆ ಪ್ರಧಾನಮಂತ್ರಿ, ಮುಖ್ಯಮಂತ್ರಿ, ಜಿಲ್ಲಾಧಿಕಾರಿಗಳು, ಎಸ್ ಪಿಗಳಿಗೂ ಪತ್ರ ಬರೆದು ಆನ್ ಲೈನ್ ಗೇಮ್ ಗಳನ್ನು ನಿಷೇಧಿಸುವಂತೆ ಮನವಿ ಮಾಡಿದ್ದ. ಅಲ್ಲದೇ ವಂಚಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದ. ಆದರೂ ಯಾವುದೇ ಕ್ರಮ ಕೈಗೊಂಡಿಲ್ಲದ ಹಿನ್ನೆಲೆಯಲ್ಲಿ ಯುವಕ ವಿಡಿಯೋ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಇದನ್ನೂ ಓದಿ: Death: ಮುಲ್ಕಿ: ಹಳಿ ದಾಟುತ್ತಿದ್ದಾಗ ರೈಲು ಢಿಕ್ಕಿ: ವ್ಯಕ್ತಿ ಮೃತ್ಯು!
Comments are closed.