Bengaluru: ಇನ್ಫೋಸಿಸ್ ನ ಶೌಚಾಲಯದಲ್ಲಿ ಮಹಿಳೆಯ ವಿಡಿಯೋ ಮಾಡುತ್ತಿದ್ದ ಟೆಕ್ಕಿಯ ಬಂಧನ!

Bengaluru: ಇನ್ಫೋಸಿಸ್ ಕಚೇರಿಯ ಶೌಚಾಲಯದಲ್ಲಿ ಮಹಿಳಾ ಉದ್ಯೋಗಿಯ ವಿಡಿಯೋ ರಹಸ್ಯವಾಗಿ ಸೆರೆ ಹಿಡಿಯುತ್ತಿದ್ದ ಕಾಮುಕನನ್ನು ಸಿಟಿ ಪೊಲೀಸರು ಬಂಧಿಸಿದ್ದಾರೆ.

ಅಂದ್ರಪ್ರದೇಶ ಮೂಲದ ನಾಗೇಶ್ ಮಲಿ ಬಂಧಿತ ಆರೋಪಿಯಾಗಿದ್ದು ಸಿಟಿ ಪೊಲೀಸ್ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿದೆ. ಶೌಚಾಲಯದಲ್ಲಿ ಮಹಿಳಾ ಉದ್ಯೋಗಿಯ ವಿಡಿಯೋ ರೆಕಾರ್ಡ್ ಮಾಡುವಾಗಲೇ ಆರೋಪಿಯು ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.
ಪಕ್ಕದ ಶೌಚಾಲಯದ ಕಮೋಡ್ ಮೇಲೆ ನಿಂತು ರಹಸ್ಯವಾಗಿ ತನ್ನ ಮೊಬೈಲ್‌ನಲ್ಲಿ ಮಹಿಳಾ ಉದ್ಯೋಗಿಯ ಶೌಚಾಲಯದ ವಿಡಿಯೋ ರೆಕಾರ್ಡ್ ಮಾಡಿದ್ದಾನೆ. ಈತ ರೆಕಾರ್ಡ್ ಮಾಡುತ್ತಿರುವುದು ಎದುರುಗಡೆ ಡೋರ್ ಮೇಲೆ ಪ್ರತಿಬಿಂಬ ಮೂಡಿದೆ. ಕೂಡಲೇ ಹೊರ ಬಂದು ಪರಿಶೀಲನೆ ಮಾಡಿದ್ದಾರೆ. ಆಗ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡುತ್ತಿದ್ದ ಆರೋಪಿ ಸಿಕ್ಕಿಬಿದ್ದಿದ್ದಾನೆ.
ಈ ವೇಳೆ ಮಹಿಳೆ ಕಿರುಚಾಡಿದ್ದು, ಅಲ್ಲಿಯೇ ಮಹಿಳಾ ಉದ್ಯೋಗಿಯ ಕ್ಷಮೆ ಕೇಳಿದ್ದಾನೆ. ಈ ಹಂತದಲ್ಲಿ ಎಚ್‌ಆರ್ ಸಿಬ್ಬಂದಿ ಬಂದು ಪರಿಶೀಲಿಸಿದಾಗ 30ಕ್ಕೂ ಅಧಿಕ ಮಹಿಳೆಯರ ವಿಡಿಯೋ ಇದರಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ.
ಇದನ್ನೂ ಓದಿ: UPI Bank: ಬೆಂಗಳೂರಿನಲ್ಲಿ ಭಾರತದ ಮೊದಲ ಸಂಪೂರ್ಣ ಯುಪಿಐ ಆಧಾರಿತ ಬ್ಯಾಂಕ್ ಆರಂಭ – ಇದರ ವಿಶೇಷತಗಳೇನು?
Comments are closed.