Mangaluru: ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.12 ರಂದು ಲೋಕ ಅದಾಲತ್ ಕಾರ್ಯಕ್ರಮ!

Mangaluru: “ತ್ವರಿತ ನ್ಯಾಯಕ್ಕಾಗಿ” ಎಂಬ ಘೋಷ ವಾಕ್ಯ ದೊಂದಿಗೆ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ವ್ಯಾಜ್ಯ ಇತ್ಯರ್ಥ ಪಡಿಸಿ ಕೊಳ್ಳಿರಿ ಎನ್ನುವ ಮೂಲಕ, ರಾಜೀಯಾಗಬಹುದಾದ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಇತ್ಯರ್ಥ ಪಡಿಸುವ ಲೋಕ ಅದಾಲತ್ ಕಾರ್ಯ ಕ್ರಮ ಜು.12 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯಲಿದೆ. ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಇತ್ಯರ್ಥವಾಗಿ ಲೋಕ ಅದಾಲತ್ ಯಶಸ್ವಿ ಯಾಗಲು ಎಲ್ಲರೂ ಸಹಕರಿಸಬೇಕೆಂದು ಅಧ್ಯಕ್ಷರು, ದ.ಕ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ ಬಸವರಾಜ ಅವರು ಮನವಿ ಮಾಡಿದರು.

ಈಗಾಗಲೇ ಜುಲೈ 12ರಂದು ನಡೆಯಲಿರುವ ಲೋಕ ಆದಾಲತ್ ಕಾರ್ಯಕ್ರಮದಲ್ಲಿ ನ್ಯಾಯಾಧಿಶರು,ಮಂಗಳೂರು ವಕೀಲರ ಸಂಘದ ಅಧ್ಯಕ್ಷರು ಹಾಗೂ ಸದಸ್ಯರುಗಳು, ಪೊಲೀಸ್ ಅಧಿಕಾರಿಗಳು, ಜಿಲ್ಲಾಧಿಕಾರಿ , ಅಭಿಯೋಜಕರು, ಇನ್ಸೂರೆನ್ಸ್ ಕಂಪೆನಿಗಳ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಈ ಬಾರಿಯ ಲೋಕ ಅದಾಲತ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಇತ್ಯರ್ಥಕ್ಕಾಗಿ ಬಾಕಿ ಇರುವ ಸಿವಿಲ್, ವೈವಾಹಿಕ, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ಚೆಕ್‌ಬೌನ್ಸ್ ಪ್ರಕರಣಗಳು ಸೇರಿದಂತೆ ಹಲವಾರು ಪರಸ್ಪರ ರಾಜಿಯಾಗಬಹುದಾದಂತ ಸಿವಿಲ್, ಕ್ರಿಮಿನಲ್ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗುವುದು. ಅಲ್ಲದೆ ಬ್ಯಾಂಕುಗಳಿಗೆ ಸಂಬಂಧಿಸಿದ ಸಾಲದ ಹಣದ ವಸೂಲಾತಿ ಪ್ರಕರಣಗಳು, ವಿದ್ಯುಚ್ಛಕ್ತಿಮಂಡಳಿ, ಜಲ ಮಂಡಳಿ ಅಥವಾ ಜಿಲ್ಲಾ ನ್ಯಾಯಾಲಯಕ್ಕೆ ಬರಬಹುದಾದಂತಹ ಇತರೆ ಯಾವುದೇ ಪ್ರಕರಣ ಗಳನ್ನು ಪೂರ್ವ ವ್ಯಾಜ್ಯ ಪ್ರಕರಣಗಳೆಂದು ಪರಿಗಣಿಸಿ, ಅವುಗಳಲ್ಲಿ ಸಹ ಉಭಯ ಕಕ್ಷಿದಾರರನ್ನು ಕರೆಸಿಕೊಂಡು ರಾಜಿ ಸಂಧಾನದ ಮೂಲಕ ವಿವಾದಗಳನ್ನು ಬಗೆಹರಿಸಿ ನ್ಯಾಯ ಒದಗಿಸಲಾಗುವುದು.
ಎಸಿಯಲ್ಲಿ ಕಾಣಿಸಿಕೊಂಡ ಹೊಗೆ: ನಿವೃತ್ತ ಶಿಕ್ಷಕ ಮೃತ್ಯು!
Comments are closed.