Mangaluru: ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಕಣ್ಣೂರು ಏರ್ಪೋಟ್‌ನಲ್ಲಿ ಸೆರೆ

Share the Article

Mangaluru: ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಅಬ್ದುಲ್‌ ರಹಿಮಾನ್‌ ಎನ್ನುವವನ್ನು ಎನ್‌ಐಎ ಅಧಿಕಾರಿಗಳು ಬಂಧನ ಮಾಡಿದ್ದಾರೆ. ಕೇರಳದ ಕಣ್ಣೂರಿನ ಏರ್ಪೋರ್ಟ್‌ನಲ್ಲಿ ಬಂಧನ ಮಾಡಿದ್ದಾರೆ.

ರಹಿಮಾನ್‌ ಕತಾರ್‌ನಿಂದ ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದಾಗಲೇ ಎನ್‌ಐಎ ಅಧಿಕಾರಿಗಳು ಬಲೆ ಬೀಸಿದ್ದಾರೆ.

ಅಬ್ದುಲ್‌ ರಹಿಮಾನ್‌ ಹೆಸರಲ್ಲಿ ನಾಲ್ಕು ಲಕ್ಷ ಬಹುಮಾನ ಘೋಷಣೆಯಾಗಿತ್ತು. ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗಳನ್ನು ಎನ್‌ಐಎ ಬಂಧನ ಮಾಡುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಅಬ್ದುಲ್‌ ರಹಿಮಾನ್‌, ವಿದೇಶಕ್ಕೆ ಹಾರಿದ್ದ.

ಈ ಕುರಿತು ಎನ್‌ಐಎ ಲುಕೌಟ್‌ ನೋಟಿಸ್‌ ಜಾರಿ ಮಾಡಲಾಗಿತ್ತು. ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದಲ್ಲಿ ಒಟ್ಟು 28 ಮಂದಿಯ ವಿರುದ್ಧ ಚಾರ್ಜ್‌ಶೀಟ್‌ ಹಾಕಲಾಗಿದೆ ಎಂದು ಎನ್‌ಐಎ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಜುಲೈ 26,2022 ರಂದು ಪ್ರವೀನ್‌ ನೆಟ್ಟಾರು ಅವರನ್ನು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಕೊಲೆ ಮಾಡಲಾಗಿತ್ತು.

Comments are closed.