CM Siddaramiah: ಸಿಎಂ ಸಿದ್ದರಾಮಯ್ಯಗೆ ರಾಷ್ಟ್ರಮಟ್ಟದಲ್ಲಿ ಮಹತ್ವದ ಜವಾಬ್ದಾರಿ – ಕಾಂಗ್ರೆಸ್ ಹೈಕಮಾಂಡ್ ಘೋಷಣೆ !!

Share the Article

CM Siddaramiah : ಕಾಂಗ್ರೆಸ್ ಕಮಾಂಡ್ ಸಿಎಂ ಸಿದ್ದರಾಮಯ್ಯಗೆ ರಾಷ್ಟ್ರಮಟ್ಟದ ಹುದ್ದೆ ನೀಡಿದ್ದು, ಹಿಂದುಳಿದ ವರ್ಗಗಳ ಸಲಹಾ ಮಂಡಳಿ ಸಮಿತಿಯಲ್ಲಿ ಮಹತ್ವದ ಜವಾಬ್ದಾರಿಯನ್ನು ನೀಡಿದೆ ಎಂದು ಮೂಲಗಳು ತಿಳಿಸಿವೆ.

 

ಹೌದು, ದೇಶದಲ್ಲಿ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಸಮುದಾಯಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಪರಿಹಾರ ಒದಗಿಸಲು ಕಾರ್ಯತಂತ್ರ ರೂಪಿಸುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಷ್ಟ್ರೀಯ ಮಟ್ಟದ ಸಲಹಾ ಮಂಡಳಿಯನ್ನು ಎಐಸಿಸಿ ರಚಿಸಿದೆ. ಈ ಮಂಡಳಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಐಸಿಸಿ ಮಹತ್ವದ ಸಲಹಾ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ. ನಾಲ್ವರು ಮಾಜಿ ಮುಖ್ಯಮಂತ್ರಿಗಳು, ೨೪ ಸದಸ್ಯರ ಸಲಹಾ ಮಂಡಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

 

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಮಂಡಳಿಯ ರಚನೆಗೆ ಇತ್ತೀಚೆಗೆ ಅನುಮೋದನೆ ನೀಡಿದ್ದಾರೆ. ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಮತ್ತು ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಕೂಡ ಮಂಡಳಿಯಲ್ಲಿದ್ದಾರೆ.

 

ಅಹಿಂದ ನಾಯಕನಾಗಿ ಯಶಸ್ವಿಯಾಗಿರುವ ಸಿದ್ದರಾಮಯ್ಯ ಅವರಿಗೆ ಹಿಂದುಳಿದ ವರ್ಗಗಳನ್ನು ಸಂಘಟಿಸಿದ ಅನುಭವವಿದೆ. ಹಿಂದುಳಿದ ವರ್ಗಗಳ ಸಮಸ್ಯೆಗಳ ಪರಿಹಾರದ ಸಾಧಕ-ಬಾಧಕಗಳ ಬಗ್ಗೆ ತಿಳಿದಿರುವುದರಿಂದ ದೇಶದಲ್ಲಿ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಸಮುದಾಯಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಕೂಲಂಕಷವಾಗಿ ಅರಿತು ಅವುಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಲು ಸಿದ್ದರಾಮಯ್ಯ ಅವರಿಗೆ ಜವಾಬ್ದಾರಿ ನೀಡಲಾಗಿದೆ ಎಂದು ತಿಳಿದು ಬಂದಿದೆ.

 

ಕೆಪಿಸಿಸಿ ಕಚೇರಿಯ ಆವರಣದಲ್ಲಿರುವ ಭಾರತ್‌ ಜೋಡೊ ಭವನದಲ್ಲಿ ಮಂಡಳಿಯ ಮೊದಲ ಸಭೆ ಇದೇ 15ರಂದು ‌ನಡೆಯಲಿದೆ. ಮಂಡಳಿಯ ಸದಸ್ಯರು, ಸಂಚಾಲಕರು, ಕಾರ್ಯದರ್ಶಿಗಳು, ಕಾಂಗ್ರೆಸ್‌ನ ಹಿಂದುಳಿದ ವರ್ಗಗಳ ಪ್ರಮುಖ ನಾಯಕರು ಸೇರಿದಂತೆ ದೇಶದ ವಿವಿಧ ರಾಜ್ಯಗಳ 90 ನಾಯಕರಿಗೆ ಈ ಸಭೆಯ ಆಹ್ವಾನ ನೀಡಲಾಗಿದೆ. ಐವರು ಮಾಜಿ ಮುಖ್ಯಮಂತ್ರಿಗಳು, ಹತ್ತು ಮಂದಿ ಕೇಂದ್ರದ ಮಾಜಿ ಸಚಿವರು ಕೂಡ ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.

Comments are closed.