Puttur: ಪುತ್ತೂರು: ಪಿಜಿ ಜಗನ್ನಿವಾಸ ರಾವ್‌ ಗೆ ಶಿಸ್ತು ಕ್ರಮದ ಎಚ್ಚರಿಕೆ ನೀಡಿ ನೋಟಿಸ್‌ ಜಾರಿ ಮಾಡಿದ ಪುತ್ತೂರು ಬಿಜೆಪಿ

Share the Article

Puttur: ಪುತ್ತೂರು: ತನ್ನ ಸಹಪಾಠಿ ವಿದ್ಯಾರ್ಥಿನಿ ಜೊತೆ ಲೈಂಗಿಕ ವಂಚನೆ ಎಸಗಿದ ಪ್ರಕರಣದಲ್ಲಿ ಆರೋಪಿಯಾಗಿರುವ ಪುತ್ರನಿಂದ ಪಕ್ಷಕ್ಕೆ ಮುಜುಗರ ಉಂಟಾದ ಹಿನ್ನೆಲೆಯಲ್ಲಿ, ಪುತ್ತೂರು ಬಿಜೆಪಿ ನಗರಮಂಡಲದ ಮಾಜಿ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್‌ ಅವರಿಗೆ ಶಿಸ್ತು ಕ್ರಮದ ಎಚ್ಚರಿಕೆ ನೀಡಲಾಗಿರುವ ಕುರಿತು ವರದಿಯಾಗಿದೆ.

ಪಕ್ಷದ ಸ್ಥಳೀಯ ಘಟಕವು ಶೋಕಾಸ್‌ ನೋಟಿಸ್‌ ಜಾರಿ ಮಾಡಿರುವ ಕುರಿತು ವರದಿಯಾಗಿದೆ.

ಜಗನ್ನಿವಾಸ ರಾವ್‌ ಅವರ ಪುತ್ರನಿಂದ ವಂಚನೆಗೊಳಗಾದ ಸಂತ್ರಸ್ತೆ ಮಗುವಿಗೆ ಜನ್ಮ ನೀಡಿದ್ದು, ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್‌ ಠಾಣೆಯಲ್ಲಿ ದೂರನ್ನು ದಾಖಲು ಮಾಡಿದ್ದರು. ಆರೋಪಿ ಪುತ್ರನಿಗೆ ಮೈಸೂರಿನಲ್ಲಿ ಅಡಗಿಕೊಳ್ಳಲು ನೆರವು ನೀಡಿದ ಆರೋಪದಲ್ಲಿ ಪಿ.ಜಿ.ಜಗನ್ನಿವಾಸ ರಾವ್‌ ಅವರನ್ನು ಬಂಧನ ಮಾಡಿ, ನಂತರ ಜಾಮೀನಿನ ಮೂಲಕ ಬಿಡುಗಡೆ ಮಾಡಲಾಗಿತ್ತು.

ಈ ಎಲ್ಲಾ ಬೆಳವಣಿಗೆಯಿಂದ ಬಿಜೆಪಿ ಹಾಗೂ ಸಂಘ ಪರಿವಾರಕ್ಕೆ ರಾಜ್ಯಮಟ್ಟದಲ್ಲಿ ತೀವ್ರ ಮುಜುಗರವನ್ನುಂಟು ಆಗಿರುವ ಕುರಿತು ವರದಿಯಾಗಿದೆ. ಜುಲೈ 3 ರಂದು ಪುತ್ತೂರಿಗೆ ಭೇಟಿ ನೀಡಿದ್ದ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ ಅವರು ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಪುತ್ತೂರು ಬಿಜೆಪಿ ಘಟಕಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು ಎನ್ನಲಾಗಿದೆ.

ಇದೀಗ ಜಿಲ್ಲಾಧ್ಯಕ್ಷರ ಸೂಚನೆಯ ಮೇರೆಗೆ ಪುತ್ತೂರು ಬಿಜೆಪಿ ನಗರ ಮಂಡಲದ ಅಧ್ಯಕ್ಷರು ಪಿ.ಜಿ.ಜಗನ್ನಿವಾಸ ರಾವ್‌ ಅವರಿಗೆ ನೋಟಿಸ್‌ ಜಾರಿ ಮಾಡಿರುವುದಾಗಿ ಖಚಿತಗೊಳಿಸಿರುವ ಕುರಿತು ವರದಿಯಾಗಿದೆ.

ಇದನ್ನೂ ಓದಿ: Dharmasthala: ಧರ್ಮಸ್ಥಳ: ಮೂರು ಹೊಸ ರೂಟ್ ಬಸ್ ಗಳಿಗೆ ಚಾಲನೆ ನೀಡಿದ ಶಾಸಕ ಹರೀಶ್ ಪೂಂಜ!

Comments are closed.