Suicide: ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆ – ಮೂವರು ಸಾವು, ಒಬ್ಬರ ಸ್ಥಿತಿ ಗಂಭೀರ

Suicide: ಬೆಳಗಾವಿಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ನಗರದ ಜೋಷಿಮಾಳ್ ನಲ್ಲಿ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದರಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಸಂತೋಷ್ ಕುರುಡೇಕರ್ (44), ಸುವರ್ಣ, ಮಂಗಳಾ ಮೃತರು. ತಾಯಿ, ಮಗ, ಮಗಳು ಮೂವರು ಮೃತರು. ಸುನಂದಾ ಕುರುಡೇಕರ್ ಸ್ಥಿತಿ ಗಂಭೀರವಾಗಿದೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಹಾಪುರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.
ಶಹಾಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Comments are closed.