Mangalore: ಮಂಗಳೂರಿಗೆ ಮಾದಕ ವಸ್ತು ಪೂರೈಕೆ: ಮೂವರು ಅರೆಸ್ಟ್!

Mangalore: ಮಂಗಳೂರು(Mangalore) ನಗರಕ್ಕೆ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಅಂತರರಾಜ್ಯ ಜಾಲವನ್ನು ಭೇದಿಸಿರುವ ಮಂಗಳೂರು ಸೆನ್ ಕ್ರೈಂ ಪೊಲೀಸರು, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರ ಮೂಲದ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಸಂಬಂಧ ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯ ಕಾಲಂ 8(c), 20(b)(ii)(B) ಅಡಿಯಲ್ಲಿ ಜು 2ರಂದು ಪ್ರಕರಣ ದಾಖಲಾಗಿತ್ತು. ಬಂಧಿತರಿಂದ ಕೃತ್ಯಕ್ಕೆ ಬಳಸಿದ 3 ಮೊಬೈಲ್ ಹಾಗೂ ₹1,78,920 ರೂ. ವಶಪಡಿಸಿಕೊಳ್ಳಲಾಗಿದೆ.
ಇದನ್ನೂ ಓದಿ: Suicide: ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆ – ಮೂವರು ಸಾವು, ಒಬ್ಬರ ಸ್ಥಿತಿ ಗಂಭೀರ
Comments are closed.