Weather Report: ಕರ್ನಾಟಕದ ಹವಾಮಾನ ಮುನ್ಸೂಚನೆ : ತೋಟಗಳಿಗೆ ಔಷಧಿ ಸಿಂಪಡಿಸಲು ಇಡೀ ದಿನ ಕಾಲಾವಕಾಶ

Share the Article

Weather Report: ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮುಂದಿನ 10 ದಿನಗಳವರೆಗೂ ಬಿಟ್ಟು ಬಿಟ್ಟು ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ತೋಟಗಳಿಗೆ ಔಷಧಿ ಸಿಂಪಡಿಸಲು ಇಡೀ ದಿನ ಕಾಲಾವಕಾಶ ಸಿಗುವ ಸಾಧ್ಯತೆಗಳು ಕಾಣಿಸುತ್ತಿಲ್ಲ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ತಾಲೂಕುಗಳಲ್ಲಿ ಸಾಮಾನ್ಯ ಮಳೆ ಹಾಗೂ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಇದೇ ವಾತಾವರಣ ಮುಂದುವರಿಯುವ ಲಕ್ಷಣಗಳಿದ್ದು, ಜುಲೈ 16ರಿಂದ ಮಲೆನಾಡಿನ ಬಹುತೇಕ ಭಾಗಗಳಲ್ಲಿ ಮಳೆಯಾಗುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ದಾವಣಗೆರೆ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಉಳಿದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಈಗಿನಂತೆ ಜುಲೈ 16ರಿಂದ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಇದನ್ನೂ ಓದಿ: Information department: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅರ್ಜಿ ಆಹ್ವಾನ – ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಗೆ ಅವಕಾಶ

Comments are closed.