Bantwala: ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್!

Share the Article

Bantwala: ಪ್ರಕರಣದ ವಿಚಾರಣೆಯ ವೇಳೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಕೇರಳದ ಮಂಜೇಶ್ವರದಲ್ಲಿ ಗುರುವಾರ ಬಂಧಿಸಿದ್ದಾರೆ.

ಬಂಧಿತ ಆರೋಪಿ ಬಂಟ್ವಾಳ ಮಂಚಿ ನಿವಾಸಿ ಹಿದಾಯತ್ ಅಲಿಯಾಸ್ ಅಬ್ದುಲ್ಲ ಎಂದು ತಿಳಿದು ಬಂದಿದೆ. ಆರೋಪಿಯು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಜಾಮೀನಿನ ಮೇಲೆ ಬಿಡುಗಡೆಗೊಂಡು ಆ ಬಳಿಕ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ 2023ರ ಡಿಸೆಂಬರ್‌ನಿಂದ ತಲೆಮರೆಸಿಕೊಂಡಿದ್ದನು.

ಈ ಹಿನ್ನೆಲೆ ಆರೋಪಿಯ ವಿರುದ್ದ ಬಂಟ್ವಾಳ (Bantwala) ನಗರ ಠಾಣೆಯಲ್ಲಿ ಜು.10ರಂದು ಪ್ರಕರಣ ದಾಖಲಿಸಲಾಗಿತ್ತು.

ಇದನ್ನೂ ಓದಿ: Railway Recruitment: ರೈಲ್ವೆಯಲ್ಲಿ ಉದ್ಯೋಗ ಪಡೆಯಲು ಸುವರ್ಣ ಅವಕಾಶ, ಒಂದು ಲಕ್ಷಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ

Comments are closed.