Mangalore: ಡ್ರಗ್ಸ್ ಜಾಲದ ಬೆನ್ನುಬಿದ್ದ ಮಂಗಳೂರು ಪೊಲೀಸರು: ಬೀದರ್ ಮೂಲದ ವೈದ್ಯನ ಬಂಧನ!

Share the Article

Mangalore: ಮಂಗಳೂರಿನಲ್ಲಿ (Mangalore) ಡ್ರಗ್ಸ್ ಜಾಲದ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆಸಿರುವ ಪೊಲೀಸರು ಬೀದರ್ ಮೂಲದ ವೈದ್ಯರೊಬ್ಬರನ್ನು ಬಂಧಿಸಿದ್ದಾರೆ.

ವೈದ್ಯರ ಬಂಧನದ ಬೆನ್ನಲ್ಲೇ, ದಕ್ಷಿಣ ಕನ್ನಡ ಜಿಲ್ಲೆಯ ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದ ಅನೇಕ ಸ್ಫೋಟಕ ಮಾಹಿತಿಗಳು ಕೂಡ ಬೆಳಕಿಗೆ ಬಂದಿವೆ. ಬೀದರ್ ಮೂಲದ, ಪ್ರಸ್ತುತ ಬೆಂಗಳೂರಿನ ಕೋಡಿಪಾಳ್ಯ ನಿವಾಸಿಯಾಗಿರುವ ಪ್ರಜ್ವಲ್ ಪೀಣ್ಯಾಸ್ ಬಂಧಿತ ವೈದ್ಯ. ಪ್ರಜ್ವಲ್ ಪೀಣ್ಯಾಸ್ ಹಾಗೂ ಇತರ ಪೆಡ್ಲರ್​​ಗಳು ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು ಡ್ರಗ್ಸ್ ಪೂರೈಕೆ ಮಾಡುತ್ತಿದ್ದರು ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.

ಡ್ರಗ್ಸ್ ಜಾಲದ ಬೆನ್ನುಬಿದ್ದ ಮಂಗಳೂರು ಪೊಲೀಸರು 6 ಆರೋಪಿಗಳನ್ನು ಬಂಧಿಸಿದ್ದರು. ಬಂಧಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ ವೇಳೆ, ವೈದ್ಯ ಪ್ರಜ್ವಲ್ ಪೀಣ್ಯಾಸ್ ಕಿಂಗ್​ಪಿನ್ ಎಂಬುದು ಗೊತ್ತಾಗಿದೆ. ಪ್ರಕರಣ ಸಂಬಂಧ ಈವರೆಗೆ ಒಟ್ಟು 9 ಆರೋಪಿಗಳನ್ನು ಬಂಧಿಸಲಾಗಿದೆ.

ಬೀದರ್ ಮೂಲದ ವೈದ್ಯನನ್ನು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ.

Comments are closed.