Kolkatta: ಕೋಲ್ಕತ್ತಾ ಐಐಎಂ ಬಾಯ್ಸ್‌ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಆರೋಪಿ ಅರೆಸ್ಟ್‌

Share the Article

Kolkatta: ಇಂಡಿಯನ್‌ ಇನ್ಸ್ಟಿಟ್ಯೂಷನ್‌ ಆಫ್‌ ಮ್ಯಾನೇಜ್‌ಮೆಂಟ್‌ ಕಾಲೇಜಿನ ಹುಡುಗರ ಹಾಸ್ಟೆಲ್‌ನಲ್ಲಿ ಮತ್ತು ಬರಿಸುವ ಪಾನೀಯ ನೀಡಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದೆ.

ಹರಿದೇವ್‌ಪುರ ಪೊಲೀಸ್‌ ಠಾಣೆಯಲ್ಲಿ ಸಂತ್ರಸ್ತೆ ದೂರು ದಾಖಲಿಸಿದ್ದಾರೆ. ಎಫ್‌ಐಆರ್‌ ಆಧಾರದ ಮೇಲೆ ಆರೋಪಿಯನ್ನು ಬಂಧನ ಮಾಡಲಾಗಿದೆ. ಐಐಎಂ ಕೋಲ್ಕತ್ತಾದ ಬಾಲಕರ ಹಾಸ್ಟೆಲ್‌ ಒಳಗೆ ಶುಕ್ರವಾರ ಈ ಘಟನೆ ನಡೆದಿರುವ ಕುರಿತು ಪೊಲೀಸರ ಅಧಿಕಾರಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಅತ್ಯಾಚಾರ ಎಸಗಿದ ಆರೋಪಿ ವಿದ್ಯಾರ್ಥಿಯನ್ನು ಶುಕ್ರವಾರ ರಾತ್ರಿ ಬಂಧನವಾಗಿದೆ. ಘಟನೆ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.

Comments are closed.