D K Shivkumar : ‘ಡಿಕೆ ಶಿವಕುಮಾರ್ ಗೆ ಶಾಸಕರ ಬೆಂಬಲವಿಲ್ಲ’ ಎಂದ ಸಿದ್ದರಾಮಯ್ಯ – ಡಿಕೆಶಿ ಪ್ರತಿಕ್ರಿಯೆ ಏನು ಗೊತ್ತಾ?

D K Shivkumar : ಡಿಕೆ ಶಿವಕುಮಾರ್ ಅವರಿಗೆ ಹೆಚ್ಚಿನ ಶಾಸಕರ ಬೆಂಬಲವಿಲ್ಲ. ಕೆಲವರು ಮಾತ್ರ ಬೆಂಬಲ ನೀಡುತ್ತಾರೆ. ಹೀಗಾಗಿ 5 ವರ್ಷಗಳ ಕಾಲ ನಾನೇ ಮುಖ್ಯಮಂತ್ರಿ. 2028ರಲ್ಲೂ ನನ್ನ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ ಎಂದು ಕೆಲ ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದರು. ಇದೀಗ ಈ ಕುರಿತಂತೆ ಕೊನೆಗೂ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಹೌದು, ದೆಹಲಿಯಿಂದ ಬಂದ ಡಿಕೆ ಶಿವಕುಮಾರ್ ಅವರು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ನಾನು ಪಕ್ಷದ ಅಧ್ಯಕ್ಷನಾಗಿದ್ದೇನೆ. ಪಕ್ಷದವರು ಏನು ಹೇಳಿದ್ದಾರೆ ಎಂದು ಈಗಾಗಲೇ ಸಿಎಂ ಉಲ್ಲೇಖಿಸಿದ್ದಾರೆ. ಕೆಲವೇ ಶಾಸಕರ ಬೆಂಬಲದ ಬಗ್ಗೆ ಸಿಎಂ ಹೇಳಿಕೆಯನ್ನು ಮಾಧ್ಯಮಗಳಲ್ಲಿ ನಾನು ಗಮನಿಸಿದ್ದೇನೆ. ಎಲ್ಲ ಪ್ರಶ್ನೆಗಳಿಗೆ ಸಿಎಂ ಉತ್ತರ ನೀಡಿದ್ದು, ಅವರು ಮಾತನಾಡಿದ ಬಳಿಕ ಪದೇ ಪದೇ ನಾನು ಮಾತನಾಡುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.
Comments are closed.