Belthangady : ಶಾಲಾ ಶಿಕ್ಷಕಿ ನೇಣು ಬಿಗಿದು ಆತ್ಮಹತ್ಯೆ !

Share the Article

Belthangady : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಯ್ಯೂರಿನಲ್ಲಿ ಶಿಕ್ಷಕಿ, ವಿವಾಹಿತೆ ಮಹಿಳೆಯೋರ್ವರು ತನ್ನ ತಾಯಿ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

 

ಕೊಯ್ಯೂರು ಗ್ರಾಮದ ದರ್ಖಾಸ್ ನಿವಾಸಿ ದೇವಪ್ಪ ಬಂಗೇರ ಎಂಬವರ ಪುತ್ರಿ ರಮ್ಯ (32) ಮನೆಯ ಕೊಣೆಯಲ್ಲಿ ನಿನ್ನೆ ಮಧ್ಯಾಹ್ನ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

 

ಎರಡು ವರ್ಷದ ಹಿಂದೆ ಕೊಯ್ಯೂರು ಗ್ರಾಮದ ಪಾದಡ್ಕ ನಿವಾಸಿ ಲತೀಶ್ ನೊಂದಿಗೆ ಈಕೆಯ ವಿವಾಹವಾಗಿತ್ತು. ರಮ್ಯ ಬೆಳ್ತಂಗಡಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ರಮ್ಯಗೆ ಆರೋಗ್ಯ ಸಮಸ್ಯೆಗಳಿತ್ತು ಎಂದು ತಿಳಿದುಬಂದಿದೆ.

 

ರಮ್ಯ ಅವರು ತಾಯಿ ಮನೆಗೆ ಬಂದಿದ್ದಿ, ಆರೋಗ್ಯ ಸಮಸ್ಯೆ ಬಗ್ಗೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಅನುಮಾನಿಸಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಕಂದಾಯ ಇಲಾಖೆಯ ಕಂದಾಯ ಇನ್ಸ್ಪೆಕ್ಟರ್ ಪ್ರತೀಷ್ ಮತ್ತು ಬೆಳ್ತಂಗಡಿ ಪೊಲೀಸರು ಭೇಟಿ ನೀಡಿದ್ದಾರೆ.

Comments are closed.