Mangaluru : ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿಗೆ ‘ಲೈಂಗಿಕ ದೌರ್ಜನ್ಯ’ – 68 ವರ್ಷದ ಉದ್ಯಮಿ ಅರೆಸ್ಟ್!

Mangaluru : ಅಪ್ರಾಪ್ತೇ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದ ಮೇಲೆ ಉದ್ಯಮಿಯೋರ್ವನನ್ನು ಪೊಲೀಸರು ಅರೆಸ್ಟ್ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಮುಲ್ಕಿ ಎಂಬಲ್ಲಿ ನಡೆದಿದೆ.

ಮಂಗಳೂರು ಹೊರವಲಯದ ಮುಲ್ಕಿ ಎಂಬಲ್ಲಿ ಬಾಲಕಿಯ ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ಕರೆದೋಯ್ದು ಈ ಕೃತ್ಯ ಎಸಗಲಾಗಿದೆ. ಸದ್ಯ ಸಂತ್ರಸ್ತೆಯ ತಾಯಿಯ ದೂರು ಆಧರಿಸಿ ಇದೀಗ ಆರೋಪಿ ವಿರದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.
ಕಳೆದ ಎರಡು ತಿಂಗಳಿಂದ ಬಾಲಕಿಯನ್ನು ಶಾಲೆಗೆ ಉದ್ಯಮಿ ತನ್ನ ಕಾರಿನಲ್ಲಿ ಕರೆದೊಯ್ಯುತ್ತಿದ್ದ. ಈ ವೇಳೆ ಆಕೆಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಸಂತ್ರಸ್ತೆಯ ಹೇಳಿಕೆ ದಾಖಲಿಸಿಕೊಂಡಿರುವ ಮುಲ್ಕಿ ಪೊಲೀಸರು ತನಿಖೆ ನಡೆಸಿ 68 ವರ್ಷದ ಉದ್ಯಮಿಯನ್ನು ಇದೀಗ ಅರೆಸ್ಟ್ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಇನ್ನು ಈ ವೇಳೆ ಅಧಿಕ ರಕ್ತದ ತೊಡಕ್ಕೆ ಒಳಗಾಗಿ ಆರೋಪಿಯನ್ನು ಮುಲ್ಕಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Comments are closed.