Shiradi Ghat: ಶಿರಾಡಿಘಾಟ್‌ನಲ್ಲಿ ಜಲಪಾತಕ್ಕೆ ಬಿದ್ದ ಕಾರು

Share the Article

Shiradi Ghat: ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಶಿರಾಡಿಘಾಟ್‌ನಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಜಲಪಾತಕ್ಕೆ ಉರುಳಿಬಿದ್ದ ಘಟನೆ ನಡೆದಿದೆ. ಬೆಂಗಳೂರು ಮೂಲದ ಪ್ರವಾಸಿಗರು ಪ್ರಯಾಣ ಮಾಡುತ್ತಿದ್ದ ಕಾರು, ಜಲಪಾತ ನೋಡಲೆಂದು ನಿಲ್ಲಿಸಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಾಲ್ಸ್‌ಗೆ ಉರುಳಿದೆ.

ಆದರೆ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಅನಾಹುತ ಆಗಿಲ್ಲ. ಚಾಲಕನಿಗೆ ಮಾತ್ರ ಸಣ್ಣಪುಟ್ಟ ಗಾಯವಾಗಿದೆ ಎಂದು ವರದಿಯಾಗಿದೆ. ಈ ಘಟನೆ ಸಕಲೇಶಪುರ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.

Comments are closed.