Kerala: ಯೆಮೆನ್‌ನಲ್ಲಿ ಮರಣದಂಡನೆಗೆ ಗುರಿಯಾಗಿರುವ ನಿಮಿಷಾ ಪ್ರಿಯಾ ಸೇಫ್!

Share the Article

Kerala: ಭಾರತದ ಕೇಂದ್ರ ಸರ್ಕಾರದಿಂದ ಯೆಮೆನ್ ಸರ್ಕಾರದ ಜೊತೆಗೆ ಮಲೆಯಾಳಿ ನರ್ಸ್ ನಿಮಿಷಪ್ರಿಯಾ ಅವರನ್ನು ಮರಣದಂಡನೆ ಶಿಕ್ಷೆಯಿಂದ ಪಾರು ಮಾಡುವಂತೆ ನಡೆಸಲಾದ ಚರ್ಚೆಯಲ್ಲಿ ಅನೌಪಚಾರಿಕವಾಗಿ ಗಲ್ಲು ಶಿಕ್ಷೆ ಸ್ಥಗಿತ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ. ಇದರ ಬೆನ್ನಲ್ಲಿಯೇ ಸುಪ್ರೀಂ ಕೋರ್ಟ್ ತುರ್ತು ವಿಚಾರಣೆ ಮಾಡಿದ್ದು, ಪ್ರಕರಣವನ್ನು ಜು.18ಕ್ಕೆ ಮುಂದೂಡಿಕೆ ಮಾಡಿದೆ.

ಯೆಮೆನ್‌ನಲ್ಲಿ ಕೊಲೆ ಆರೋಪಕ್ಕೆ ಗುರಿಯಾಗಿ ಮರಣದಂಡನೆ ವಿಧಿಸಲ್ಪಟ್ಟಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಸುಪ್ರೀಂ ಕೋರ್ಟ್‌ನಲ್ಲಿ ಇಂದು ನಡೆದ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಶುಕ್ರವಾರಕ್ಕೆ ಮುಂದೂಡಿದೆ. ಪ್ರಕರಣವನ್ನು ತುರ್ತು ಪ್ರಕರಣವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್, ಅರ್ಜಿದಾರರಿಂದ ವಸ್ತುಸ್ಥಿತಿ ವರದಿಯನ್ನು ಸಲ್ಲಿಸುವಂತೆ ಸೂಚನೆ ನೀಡಿದೆ.

ಇಂದು ಬೆಳಿಗ್ಗೆ 10.30 ಗಂಟೆಗೆ ಕೇಂದ್ರ ಸರ್ಕಾರ ಮತ್ತು ಯೆಮೆನ್ ಸರ್ಕಾರದ ನಡುವೆ ನೇರ ಮಾತುಕತೆ ನಡೆದಿದ್ದು, ಭಾರತೀಯ ನರ್ಸ್‌ನ ಮರಣದಂಡನೆ ಸ್ಥಗಿತಗೊಳ್ಳುವ ಬಗ್ಗೆ ಅನೌಪಚಾರಿಕ ಮಾಹಿತಿ ಬಂದಿದ್ದು ಸಹ, ಅದು ಕಾರ್ಯರೂಪಕ್ಕೆ ಬರುತ್ತದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಸರ್ಕಾರದ ಪರ ವಾದ ಮಂಡಿಸಿದ ಅಟಾರ್ನಿ ಜನರಲ್ ಆರ್. ವೆಂಕಟರಮಣಿ ತಿಳಿಸಿದ್ದಾರೆ.

ಇದನ್ನೂ ಓದಿ: Tumkur: ‘ಕಾಂಗ್ರೆಸ್ ಏನ್ ದಬ್ಬಾಕಿರೋದು?..’ – ಬೆಳಗ್ಗೆಯಷ್ಟೇ ಸಿದ್ದು ಸರ್ಕಾರ ಟೀಕಿಸಿದ್ದ ಮಹಿಳಾ ಅಧಿಕಾರಿ ಸಂಜೆ ಹೊತ್ತಿಗೆ ಎತ್ತಂಗಡಿ!

Comments are closed.