Nithin Ghadkari: ಸಿಗಂಧೂರು ಸೇತುವೆ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘನೆ ಎಂದ ಸಿಎಂ ಸಿದ್ದರಾಮಯ್ಯ – ಸಾಕ್ಷಿ ಸಮೇತ ತಿರುಗೇಟು ಕೊಟ್ಟ ನಿತಿನ್ ಗಡ್ಕರಿ

Nithin Ghadkari: ರಾಜ್ಯ ಇಂದು ಐತಿಹಾಸಿಕ ಕ್ಷಣವೊಂದಕ್ಕೆ ಸಾಕ್ಷಿಯಾಗಿದೆ. ಹಲವು ದಶಕಗಳಿಂದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜನ ಎದುರು ನೋಡುತ್ತಿದ್ದ ಸಿಗಂದೂರು ಸೇತುವೆ ಹಿಂದು ಉದ್ಘಾಟನೆಯಾಗಿದೆ. ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಸೇತುವೆಯನ್ನು ಉದ್ಘಾಟಿಸಿದ್ದಾರೆ.

ಈ ಐತಿಹಾಸಿಕ ಕ್ಷಣಕ್ಕೆ ರಾಜ್ಯದ ಮುಖ್ಯಮಂತ್ರಿಗಳಾದಿಯಾಗಿ ಶಾಸಕರು ಸಚಿವರು ಯಾರು ಭಾಗಿಯಾಗಿಲ್ಲ. ಅಲ್ಲದೆ ಸಿಎಂ ಸಿದ್ದರಾಮಯ್ಯ ಅವರು ಒಂದು ದಿನ ಮುಂಚಿತವಾಗಿ ನನ್ನನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಮುಖ್ಯಮಂತ್ರಿಗಳ ಯಾರೋ ಪಕ್ಷಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಸಾಕ್ಷಿ ಸಮೇತ ಉತ್ತರಿಸಿದ್ದಾರೆ.
ಹೌದು, ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ‘ಸೇತುವೆ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜುಲೈ 11ರಂದು ಅಧಿಕೃತ ಆಹ್ವಾನ ನೀಡಲಾಗಿತ್ತು. ಖುದ್ದು ಹಾಜರಾಗಲು ಸಾಧ್ಯವಾಗದಿದ್ದಲ್ಲಿ ವರ್ಚುವಲ್ ಆಗಿ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಜುಲೈ 12ರಂದು ಕಳುಹಿಸಿದ ಪತ್ರದಲ್ಲಿ ತಿಳಿಸಲಾಗಿತ್ತು’ ಎಂದು ಎಕ್ಸ್‌ನಲ್ಲಿ ತಿಳಿಸಿದ್ದಾರೆ.
‘ಕೇಂದ್ರ ಸರ್ಕಾರ ಯಾವುದೇ ಶಿಷ್ಟಾಚಾರವನ್ನು ಉಲ್ಲಂಘಿಸಿಲ್ಲ. ಕರ್ನಾಟಕ ಸರ್ಕಾರದ ಸಹಕಾರವನ್ನು ಕೇಂದ್ರವು ನಿರಂತರವಾಗಿ ಶ್ಲಾಘಿಸುತ್ತದೆ. ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವ ಮೂಲಕ ಎಲ್ಲಾ ರಾಜ್ಯಗಳೊಂದಿಗೆ ಸಮನ್ವಯ ಸಾಧಿಸಲು ಕೇಂದ್ರವು ಬದ್ಧವಾಗಿದೆ’ ಎಂದಿದ್ದಾರೆ.
ಇದನ್ನೂ ಓದಿ: Viral Video : ತನ್ನ ಮಗಳಿಗೆ ‘ಇಂಡಿಯಾ’ ಎಂದು ಹೆಸರಿಟ್ಟ ವಿದೇಶಿ ಮಹಿಳೆ – ಕಾರಣವೂ ಬಹಿರಂಗ
Comments are closed.