Mangaluru: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಮಣ್ಣಗುಂಡಿ ಬಳಿ ಭೂ ಕುಸಿತ: ಸಂಚಾರ ಬಂದ್

Mangaluru: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಭಾರೀ ಮಳೆಯಾಗುತ್ತಿದ್ದು, ಕಡಬ ತಾಲೂಕಿನ ಮಣ್ಣಗುಂಡಿ ಬಳಿ ಗುಡ್ಡ ಕುಸಿತ ಉಂಟಾಗಿದೆ. ರಾಷ್ಟ್ರೀಯ ಹೆದ್ದಾರಿ 75 ರ ಮೇಲೆ ಭಾರೀ ಪ್ರಮಾಣದ ಮಣ್ಣು ಕುಸಿದು ಬಿದ್ದಿದ್ದು, ಪರಿಣಾಮವಾಗಿ ಬೆಂಗಳೂರು-ಮಂಗಳೂರು ಸಂಪರ್ಕ ಮಾಡುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಬಂದ್ ಆಗಿದೆ. ಮಣ್ಣು ತೆರವು ಕೆಲಸ ಕೈಗೊಳ್ಳಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ನಿರಂತರ ಮಳೆಯಾಗುತ್ತಿದ್ದು, ಉಳ್ಳಾಲ ಬೈಲ್‌ನ ಕೆಲ ಮನೆಗಳಿಗೆ ನೀರು ನುಗ್ಗಿದೆ. ಕುಂಪಲ ನಿಸರ್ಗ ಲೇಔಟ್‌ನ ಕೆಲ ಮನೆಗಳಿಗೆ ನೀರು ನುಗ್ಗಿದೆ. ಮಂಗಳೂರು ನಗರದ ಕೆಲವಡೆ ಗುಡ್ಡ ಕುಸಿತ ಉಂಟಾಗಿದೆ. ಅದ್ಯಪಾಡಿ-ಕೈಕಂಬ ಸಂಪರ್ಕ ಮಾಡುವ ರಸ್ತೆ ಮೇಲೆ ಮಣ್ಣು ಬಿದ್ದಿರುವ ಘಟನೆ ನಡೆದಿದೆ.
Comments are closed.