Suicide: ಮೊಬೈಲ್ ನೋಡಬೇಡ ಎಂದಿದ್ದಕ್ಕೆ ಮನನೊಂದು ಬಾಲಕ ಆತ್ಮಹತ್ಯೆ

Share the Article

Suicide: ಇತ್ತೀಚೆಗೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಅದರಲ್ಲೂ ಚಿಕ್ಕ ಮಕ್ಕಳು ಆತ್ಮಹತ್ಯೆಗೆ ಶರಣಾಗುತ್ತಿರುವುದು ಹೆಚ್ಚಾಗುತ್ತಿದೆ. ಇದೀಗ ಈ ರೀತಿಯ ಪ್ರಕರಣವೊಂದು ಉತ್ತರ ಕನ್ನಡದಲ್ಲಿ ನಡೆದಿದೆ.

ಮೊಬೈಲ್ ನೋಡಬೇಡ ಎಂದು ತಂದೆ ಹೇಳಿದಕ್ಕೆ ಮನನೊಂದಂತಹ ಬಾಲಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ನಡೆದಿದ್ದು, ಹಲಿಯಾಳದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 7 ನೆ ತರಗತಿ ಓದುತ್ತಿದ್ದ ಓಂ ಕದಂ(13) ಮೃತ ದುರ್ದೈವಿಯಾಗಿದ್ದು, ಆಸ್ಪತ್ರೆಗೆ ಕರೆದೊಯ್ದರು ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ.
ಇನ್ನೂ ಈ ಪ್ರಕರಣ ಹಳಿಯಾಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಪೋಷಕರು ಕಣ್ಣೀರು ಹಾಕುತ್ತಿದ್ದಾರೆ

Comments are closed.