Shocking news: ವಸತಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನ್: ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡು ಪೋಷಕರು

Share the Article

Shocking news: ಕಳೆದ ಕೆಲವು ತಿಂಗಳುಗಳ ಹಿಂದೆ ಕೆಲವು ಶಾಲೆಗಳಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸಿದ ಘಟನೆಗಳು ನಡೆದಿದ್ದು, ಶಿಕ್ಷಣ ಇಲಾಖೆಯು ಈ ಕುರಿತಾಗಿ ಶಿಕ್ಷಕರಿಗೆ ಖಡಕ್ ಸೂಚನೆ ನೀಡಿತ್ತು. ಆದರೆ ಇದೀಗ ಮತ್ತೊಮ್ಮೆ ಇಂಥದ್ದೇ ಘಟನೆಯೊಂದು ಯಾದಗಿರಿ ಜಿಲ್ಲೆ ಅರಕೇರ ಎಂಬ ಗ್ರಾಮದಲ್ಲಿ ನಡೆದಿದೆ.

ಇಲ್ಲಿನ ವಸತಿ ಶಾಲೆಯೊಂದರಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸಿರುವ ಘಟನೆ ನಡೆದಿದ್ದು, ಈ ವಿಡಿಯೋ ಇದೀಗ ವೈರಲ್ ಆಗಿದೆ . ಕಸ್ತೂರಬಾ ಗಾಂಧಿ ಬಾಲಕಿಯರ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ವಿಡಿಯೋ ವೈರಲ್ ಆಗುತ್ತಿದ್ದಂತೆ ಪೋಷಕರು ಶಾಲೆಗೆ ಬಂದು ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Comments are closed.