Crime: ಪೊಲೀಸ್ ಠಾಣೆ ಬಳಿ ಆರೋಪಿಯ ಬರ್ಬರ ಹತ್ಯೆ!

Crime: ಜಾಮೀನಿನ ಮೇಲೆ ಹೊರಬಂದಿದ್ದ ಆರೋಪಿಯನ್ನು ಪೊಲೀಸ್ ಠಾಣೆ ಬಳಿಯೇ ದುಷ್ಕರ್ಮಿಗಳು ಕೊಚ್ಚಿ ಕೊಲೆ(Murder) ಮಾಡಿರುವ ಘಟನೆ ತಮಿಳುನಾಡಿನ ಸೇಲಂನಲ್ಲಿ ನಡೆದಿದೆ.

ಮೃತ ಆರೋಪಿಯನ್ನು ತೂತುಕುಡಿ ಮೂಲದ ಮದನ್ ಅಲಿಯಾಸ್ ಅಪ್ಪುಲು ಎಂದು ಗುರುತಿಸಲಾಗಿದೆ. ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ಈತ ಷರತ್ತುಬದ್ಧ ಜಾಮೀನಿನ ಮೇಲೆ ಹೊರಬಂದಿದ್ದ.
ಬೆಳಗ್ಗೆ 10 ಗಂಟೆ ವೇಳೆಗೆ ತಮ್ಮ ಪತ್ನಿ ಜತೆಗೆ ಪೊಲೀಸ್ ಸ್ಟೇಷನ್ಗೆ ಬಂದಿದ್ದ, ನಿತ್ಯವೂ ಠಾಣೆಗೆ ಬಂದು ಸಹಿಹಾಕುವ ನಿಯಮವಿದೆ. ಅಲ್ಲಿಂದ ಊಟ ಮಾಡಲೆಂದು ಹೋಟೆಲ್ಗೆ ಹೋಗಿದ್ದ. ಹೋಟೆಲ್ನಲ್ಲಿ ಕುಳಿತಿದ್ದಾಗ ಮೂವರು ಅಪಚರಿತರು ಇದ್ದಕ್ಕಿದ್ದಂತೆ ಅವರನ್ನು ಸುತ್ತುವರೆದು ಹರಿತವಾದ ಆಯುಧಗಳಿಂದ ಚುಚ್ಚಿ ಬರ್ಬರವಾಗಿ ಹತ್ಯೆ ಮಾಡಿ ಅಲ್ಲಿಂದ ಪರಾರಿಯಾಗಿದ್ದಾರೆ.
ಇದನ್ನೂ ಓದಿ:Karnataka: ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರಿಗೆ ಎಸ್ಮಾ ಜಾರಿ!
Comments are closed.