Karawara: ಮಾಜಿ ಸಂಸದ ಅನಂತ ಕುಮಾರ್ ಹೆಗಡೆಗೆ ಜೀವ ಬೆದರಿಕೆ ಸಂದೇಶ

Karawara: ಮಾಜಿ ಸಂಸದ ಅನಂತ ಕುಮಾರ್ ಹೆಗಡೆಗೆ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆಯ ಇ-ಮೇಲ್ ಸಂದೇಶ ಬಂದಿರುವ ಕುರಿತು ವರದಿಯಾಗಿದ್ದು, ಈ ಕುರಿತು ಅನಂತ ಕುಮಾರ್ ಹೆಗಡೆ ಆಪ್ತ ಕಾರ್ಯದರ್ಶಿ ಸುರೇಶ್ ಶೆಟ್ಟಿಯವರು ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.

ಜೂನ್ 24 ರಂದು ಇ-ಮೇಲ್ ಮೂಲಕ ಜೀವ ಬೆದರಿಕೆ ಸಂದೇಶ ಬಂದಿದೆ. ಪೊಲೀಸರು ಕೇಸು ದಾಖಲು ಮಾಡಿಕೊಂಡು ತನಿಖೆ ಮಾಡುತ್ತಿದ್ದಾರೆ.
ಈ ಹಿಂದೆ ಕೂಡಾ ಅಪರಿಚಿತ ವ್ಯಕ್ತಿಯೊಬ್ಬ ಅನಂತ ಕುಂಆರ್ ಹೆಗಡೆ ಅವರಿಗೆ ತಡರಾತ್ರಿ 2 ಗಂಟೆ ಸುಮಾರಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿತ್ತು.
Comments are closed.