D K Shivkumar : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ಕಡ್ದಾಯವಾಗಿ ಹಳೆ ವಿದ್ಯಾರ್ಥಿ ಸಂಘ ಸ್ಥಾಪಿಸಿ – ಡಿಕೆ ಶಿವಕುಮಾರ್ ಆದೇಶ

Share the Article

D K Shivkumar : ರಾಜ್ಯದ ಎಲ್ಲಾ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘವನ್ನು ಕಡ್ಡಾಯವಾಗಿ ರಚನೆ ಮಾಡಬೇಕೆಂದು ಡಿಸಿಎಂ ಡಿಕೆ ಶಿವಕುಮಾರ್ ಆದೇಶವನ್ನು ಹೊರಡಿಸಿದ್ದಾರೆ.

 

ಹೌದು, ರಾಜ್ಯದ ಶಾಲೆಗಳಲ್ಲಿ ಹಳೆ ವಿದ್ಯಾರ್ಥಿ ಸಂಘವನ್ನು ಸ್ಥಾಪಿಸಬೇಕು. ಈ ಸಂಘಗಳಿಂದ ಸರ್ಕಾರಿ ಶಾಲೆಗಳಿಗೆ ಶಕ್ತಿ ತುಂಬುವ ಕೆಲಸ ಆಗುತ್ತದೆ. ಇದಕ್ಕೆ ಅಗತ್ಯ ಮಾರ್ಗದರ್ಶನ ನೀಡುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಸಲಹೆ ನೀಡಿದ್ದಾರೆ.

 

ಅಲ್ಲದೆ “ಸರ್ಕಾರಿ ಶಾಲೆಯಲ್ಲಿ ಓದಿ ದೊಡ್ಡ ಮಟ್ಟಕ್ಕೆ ಬೆಳೆದಿರುವವರು ಆ ಶಾಲೆಯ ಕಲ್ಯಾಣಕ್ಕೆ ಅಗತ್ಯ ನೆರವು ನೀಡುತ್ತಾರೆ. ಇದಕ್ಕೆ ಅಗತ್ಯ ಸಂಘಟನೆ ಆಗಬೇಕು. ವೆಂಕಟಪ್ಪನವರು ಮಾಡಿರುವ ಸಾಹಸಕ್ಕೆ ಇನ್ನು ಹೆಚ್ಚಿನ ಜನ ಕೈ ಹಾಕಬೇಕು. ಇಂತಹ ಕೆಲಸಗಳು ಸಮಾಜದಲ್ಲಿ ಅವರ ಹೆಸರುಗಳನ್ನು ಶಾಶ್ವತವಾಗಿ ಉಳಿಸುತ್ತವೆ” ಎಂದು ತಿಳಿಸಿದರು

Comments are closed.