Maharastra: ಹಿಂದೂ, ಬೌದ್ಧ, ಸಿಖ್ ಬಿಟ್ಟು ಉಳಿದವರ SC ಪ್ರಮಾಣ ಪತ್ರ ರದ್ದು – ರಾಜ್ಯ ಸರ್ಕಾರ ಆದೇಶ!!

Maharastra : ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಸಿಖ್ ಧರ್ಮವನ್ನು ಹೊರತುಪಡಿಸಿ ಬೇರೆ ಧರ್ಮಕ್ಕೆ ಸೇರಿದ ವ್ಯಕ್ತಿಯು ವಂಚನೆಯಿಂದ ಪರಿಶಿಷ್ಟ ಜಾತಿ ಪ್ರಮಾಣಪತ್ರವನ್ನು ಪಡೆದಿದ್ದರೆ, ಅದನ್ನು ರದ್ದುಗೊಳಿಸಲಾಗುವುದು ಎಂದು ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದೆ.

ಹೌದು, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಹಿಂದೂ, ಬೌದ್ಧ ಮತ್ತು ಸಿಖ್ ಧರ್ಮವನ್ನು ಹೊರತುಪಡಿಸಿ ಬೇರೆ ಧರ್ಮಕ್ಕೆ ಸೇರಿದ ವ್ಯಕ್ತಿಯೊಬ್ಬರು ಪರಿಶಿಷ್ಟ ಜಾತಿ ಪ್ರಮಾಣಪತ್ರವನ್ನು ವಂಚನೆಯಿಂದ ಪಡೆದಿದ್ದರೆ, ಅದನ್ನು ರದ್ದುಗೊಳಿಸಲಾಗುವುದು. ಸರ್ಕಾರಿ ಉದ್ಯೋಗಗಳಂತಹ ಮೀಸಲಾತಿ ಸೌಲಭ್ಯಗಳನ್ನು ಪಡೆದಿದ್ದರೆ ಅಂತಹ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅಂತಹ ವ್ಯಕ್ತಿ ವಂಚನೆಯಿಂದ ಪಡೆದ ಎಸ್‌ಸಿ ಪ್ರಮಾಣಪತ್ರವನ್ನು ಬಳಸಿಕೊಂಡು ಚುನಾವಣೆಯಲ್ಲಿ ಗೆದ್ದಿದ್ದರೆ, ಅವರ ಆಯ್ಕೆಯನ್ನು ಅನೂರ್ಜಿತವೆಂದು ಘೋಷಿಸಲಾಗುತ್ತದೆ ಎಂದು ಫಡ್ನವೀಸ್ ವಿಧಾನ ಪರಿಷತ್ತಿನಲ್ಲಿ ಭರವಸೆ ನೀಡಿದ್ದಾರೆ.
ಇದನ್ನೂ ಓದಿ: IB ACIO Recruitment 2025: ಗುಪ್ತಚರ ಇಲಾಖೆಯಲ್ಲಿ ಉದ್ಯೋಗ ಅವಕಾಶ!
Comments are closed.