Home News CM Siddaramiah : ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣಕ್ಕೆ SIT ರಚನೆ ವಿಚಾರ – ಸಿಎಂ...

CM Siddaramiah : ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣಕ್ಕೆ SIT ರಚನೆ ವಿಚಾರ – ಸಿಎಂ ಸಿದ್ದರಮ್ಮಯ್ಯ ಫಸ್ಟ್ ರಿಯಾಕ್ಷನ್

Hindu neighbor gifts plot of land

Hindu neighbour gifts land to Muslim journalist

CM Siddaramiah ರಾಜ್ಯಾದ್ಯಂತ ಭಾರಿ ಸಂಚಲನ ಸೃಷ್ಟಿಸಿದ್ದ ಧರ್ಮಸ್ಥಳ ಅಪರಾಧ ಪ್ರಕರಣಗಳ ಕುರಿತು ತನಿಖೆ ನಡೆಸಲು ಕೊನೆಗೂ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಿ ಆದೇಶ ಹೊರಡಿಸಿದ ಬೆನ್ನಲ್ಲೇ ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಅವರು ಪೋಸ್ಟ್ ಒಂದನ್ನು ಮಾಡಿ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ

ಹೌದು, ಐಪಿಎಸ್ ಆಫೀಸರ್ ಪ್ರಣವ್ ಮೋಹಂತಿ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರವು ಎಸ್ಐಟಿ ರಚನೆ ಮಾಡಿದೆ. ಜೊತೆಗೆ ಅಧಿಕಾರಿಗಳಾದ ಅನುಚೇತ್, ಸೌನ್ಯಲತ ಚಿತೆಂದ್ರಕುಮರ್ ಕೂಡ ಈ ತಂಡದಲ್ಲಿದ್ದಾರೆ. ಹೋರಾಟಗಾರರ ಬೇಡಿಕೆಯಂತೆಯೇ, ಅವರ ಸೂಚಿಸಿದ ಅಧಿಕಾರಿಯ ನೇತೃತ್ವದಲ್ಲಿಯೇ ಈ ತಂಡವನ್ನು ಸರ್ಕಾರ ರಚಿಸಿದೆ. ಈ ಬಗ್ಗೆ ಸಿಎಂ ಮಾಹಿತಿ ನೀಡಿದ್ದಾರೆ.

ಸಿದ್ದರಾಮಯ್ಯ ಮಾಡಿದ ಪೋಸ್ಟ್ ನಲ್ಲಿ ಏನಿದೆ?
ಧರ್ಮಸ್ಥಳ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬ ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಅನೇಕ ಸುದ್ದಿಗಳು ಹರಿದಾಡುತ್ತಿದೆ. ಈಗಾಗಲೇ, ಸ್ಥಳೀಯ ಹಾಗೂ ರಾಷ್ಟ್ರೀಯ ಮಾಧ್ಯಮಗಳು ತಲೆಬರುಡೆ ದೊರಕಿದ ಸ್ಥಳ ಹಾಗೂ ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿಯ ಕುಟುಂಬದವರ ಹೇಳಿಕೆಯನ್ನು ಪ್ರಸಾರ ಮಾಡಿವೆ. ಈ ಪ್ರದೇಶದಲ್ಲಿ ಅಸಹಜ ಸಾವುಗಳು, ಕೊಲೆ, ಅತ್ಯಾಚಾರ ಹೀಗೆ ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳು ನಡೆದಿರಬಹುದಾಗಿದ್ದು, ಈ ಎಲ್ಲಾ ಸಾಧ್ಯತೆಗಳನ್ನು ಪರಿಗಣಿಸಿ ಪ್ರಕರಣದ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗವು ರಾಜ್ಯ ಸರ್ಕಾರಕ್ಕೆ ಕೋರಿತ್ತು, ಇದನ್ನ ಪರಿಗಣಿಸಿದ ಸರ್ಕಾರ ತನಿಖಾ ತಂಡ ರಚನೆ ಮಾಡುವಂತೆ ಆದೇಶ ನೀಡಿದೆ.

ಐಪಿಎಸ್ ಅಧಿಕಾರಿಗಳಿರುವ ತನಿಖಾ ತಂಡಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸಹ ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಐಪಿಎಸ್ ಅಧಿಕಾರಿಗಳಿರುವ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಆದೇಶ ನೀಡಲಾಗಿದೆ. ಸದ್ಯದ ಮಾಹಿತಿ ಪ್ರಕಾರ ವಿಶೇಷ ತನಿಖಾ ತಂಡವು ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ದೂರು ಸೇರಿದಂತೆ ಇದಕ್ಕೆ ಸಂಬಂಧಪಟ್ಟಂತೆ ರಾಜ್ಯದ ಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಹಾಗೂ ದಾಖಲಾಗುವ ಎಲ್ಲಾ ಕ್ರಿಮಿನಲ್ ಪ್ರಕರಣಗಳನ್ನು ಸಮಗ್ರ ತನಿಖೆ ನಡೆಸಿ, ವರದಿ ನೀಡಲಿದೆ ಎಂದಿದ್ದಾರೆ.