Bangladesh Air Force: ಬಾಂಗ್ಲಾದೇಶ ವಾಯುಪಡೆಯ ಜೆಟ್ ಢಾಕಾ ಶಾಲೆಯ ಮೇಲೆ ಪತನ, ಹಲವರು ಸಾವನ್ನಪ್ಪಿರುವ ಶಂಕೆ

Share the Article

Bangladesh Air Force: ಬಾಂಗ್ಲಾದೇಶ ವಾಯುಪಡೆಯ ತರಬೇತಿ ವಿಮಾನವೊಂದು ಸೋಮವಾರ ಢಾಕಾದ ಶಾಲೆಯೊಂದಕ್ಕೆ ಅಪ್ಪಳಿಸಿದ ಘಟನೆ ನಡೆದಿದೆ. ಇದರ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿರುವ ಕುರಿತು ವರದಿಯಾಗಿದೆ.

ಚೀನಾ ನಿರ್ಮಿತ ಎಫ್-7 ಜೆಟ್ ವಿಮಾನವು ಢಾಕಾದ ಉತ್ತರ ಪ್ರದೇಶದಲ್ಲಿರುವ ಮೈಲ್‌ಸ್ಟೋನ್ ಶಾಲೆ ಮತ್ತು ಕಾಲೇಜು ಕಟ್ಟಡಕ್ಕೆ ಅಪ್ಪಳಿಸಿರುವ ಕುರಿತು ನಡೆದಿದೆ.

ಮಧ್ಯಾಹ್ನ 1.30 ರ ಸುಮಾರಿಗೆ ವಿಮಾನವು ಮೈಲ್‌ಸ್ಟೋನ್ ಕಾಲೇಜಿನ ಕ್ಯಾಂಟೀನ್‌ನ ಛಾವಣಿಗೆ ಅಪ್ಪಳಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಸ್ಥಳೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ರಕ್ಷಣಾ ಸಿಬ್ಬಂದಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಧಾವಿಸುವಾಗ ಅಪಘಾತದ ಸ್ಥಳದಿಂದ ಬೆಂಕಿ ಮತ್ತು ಕಪ್ಪು ಹೊಗೆ ಹೊರಬರುತ್ತಿರುವುದನ್ನು ದೃಶ್ಯಗಳು ವೈರಲ್‌ ಆಗಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ರಕ್ಷಿಸಲು ಸೇನಾ ತಂಡಗಳು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಯನ್ನು ಸಹ ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ: Mangaluru: ಮಂಗಳೂರು: ಅಪ್ರಾಪ್ತ ಬಾಲಕಿಯ ಅಪಹರಿಸಿ ಲೈಂಗಿಕ ಕಿರುಕುಳ: ಇಬ್ಬರ ಬಂಧನ

Comments are closed.