Mangalore: ರೋಶನ್‌ ಸಲ್ಡಾನ್ಹಾ 10 ಕೋಟಿ ರೂ. ವಂಚನೆ ಪ್ರಕರಣದ ತನಿಖೆ ಸಿಐಡಿಗೆ ವರ್ಗ

Share the Article

Mangalore: ನೂರಾರು ಕೋಟಿ ವಂಚನೆ ಮಾಡಿರುವ ಆರೋಪದಲ್ಲಿ ಬಂಧಿತನಾಗಿರುವ ಬಜಾಲ್‌ ಬೊಲ್ಲಗುಡ್ಡ ನಿವಾಸಿ ರೋಶನ್‌ ಸಲ್ಡಾನ್ಹಾ (43) ವಿರುದ್ಧ ಸೆನ್‌ ಪೊಲೀಸ್‌ ಠಾಣೆಯಲ್ಲಿ ಈ ಹಿಂದೆ ದಾಖಲಾಗಿದ್ದ 10 ಕೋಟಿ ರೂ. ವಂಚನೆ ಪ್ರಕರಣವನ್ನು ಹೆಚ್ಚಿನ ತನಿಖೆಗೆ ಸಿಐಡಿಗೆ ವಹಿಸಲಾಗಿದೆ.

ವಂಚನೆಯ ಮೊತ್ತ 10 ಕೋಟಿ ರೂ ಮತ್ತು ಅದಕ್ಕಿಂತ ಹೆಚ್ಚಿದ್ದರೆ ಸಿಐಡಿಗೆ ವರ್ಗಾವಣೆ ಮಾಡುವ ಅವಕಾಶವಿದೆ. ಈ ಮೂಲಕ 10 ಕೋಟಿ ರೂ ಮೊತ್ತದ ಪ್ರಕರಣದ ತನಿಖೆ ನಡೆಸುವಂತೆ ಸಿಐಡಿಗೆ ಪತ್ರ ಬರೆಯಲಾಗಿತ್ತು. ಬಿಹಾರ ಮೂಲದ ಉದ್ಯಮಿ ಕೂಡಾ ವಂಚನೆಗೊಳಗಾಗಿದ್ದು, ಈ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸೆನ್‌ ಠಾಣೆಯಲ್ಲಿ ದಾಖಲಾಗಿರುವ ಇತರ ಪ್ರಕರಣ ತನಿಖೆಯನ್ನು ಪೊಲೀಸರೇ ನಡೆಸಲಿದ್ದಾರೆ ಎಂದು ನಗರ ಪೊಲೀಸ್‌ ಆಯುಕ್ತ ಸುಧೀರ್‌ ಕುಮಾರ್‌ ರೆಡ್ಡಿ ತಿಳಿಸಿದ್ದಾರೆ.

 

Comments are closed.