Home News Mangaluru: ಮಂಗಳೂರಿನಲ್ಲಿ ವೀರರಾಣಿ ಅಬ್ಬಕ್ಕ ಹೆಸರಿನಲ್ಲಿ ಮೆರಿಟೈಮ್‌ ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಸದ ಕ್ಯಾ.ಚೌಟ ಮನವಿ!

Mangaluru: ಮಂಗಳೂರಿನಲ್ಲಿ ವೀರರಾಣಿ ಅಬ್ಬಕ್ಕ ಹೆಸರಿನಲ್ಲಿ ಮೆರಿಟೈಮ್‌ ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಸದ ಕ್ಯಾ.ಚೌಟ ಮನವಿ!

Hindu neighbor gifts plot of land

Hindu neighbour gifts land to Muslim journalist

Mangaluru: ಮಂಗಳೂರಿನಲ್ಲಿ (Mangaluru) ವೀರ ವನಿತೆ ಅಬ್ಬಕ್ಕ ರಾಣಿ ಹೆಸರಿನಲ್ಲಿ ಪ್ರತ್ಯೇಕ ಮೆರಿಟೈಮ್‌ ವಿಶ್ವವಿದ್ಯಾನಿಲಯ ಸ್ಥಾಪಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕೇಂದ್ರ ಬಂದರು, ಶಿಪ್ಪಿಂಗ್‌ ಹಾಗೂ ಜಲಮಾರ್ಗಗಳ ಸಚಿವಾಲಯದ ಕಾರ್ಯದರ್ಶಿ ಟಿ.ಕೆ. ರಾಮಚಂದ್ರನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ಮಂಗಳೂರಿನ ಭೌಗೋಳಿಕ ಅನುಕೂಲಗಳು, ಐತಿಹಾಸಿಕ ಮಹತ್ವ ಮತ್ತು ಪ್ರಮುಖ ಬಂದರುಗಳು ಮತ್ತು ಶೈಕ್ಷಣಿಕ ಸಂಸ್ಥೆಗಳಿಗೆ ಹತ್ತಿರವಿರುವ ಕಾರಣ ಇಲ್ಲಿ ಮೆರಿಟೈಮ್‌ ವಿವಿಯಂಥ ರಾಷ್ಟ್ರೀಯ ಮನ್ನಣೆಯ ಸಂಸ್ಥೆಯನ್ನು ಸ್ಥಾಪಿಸುವುದಕ್ಕೆ ಅತ್ಯಂತ ಸೂಕ್ತ ಸ್ಥಳವಾಗಿದೆ. ಈ ವಿವಿಯಲ್ಲಿ ಬಿ.ಟೆಕ್, ಬಿ.ಎಸ್ಸಿ, ಬಿಬಿಎ, ಎಂ.ಟೆಕ್, ಎಂಬಿಎ, ಎಂ.ಎಸ್ಸಿ ಮತ್ತು ಡಿಪ್ಲೊಮಾಗಳು ಸೇರಿದಂತೆ ವ್ಯಾಪಕ ಶ್ರೇಣಿಯ ಕೋರ್ಸ್ ಗಳನ್ನು ಪರಿಚಯಿಸಬಹುದು.ಇದರಿಂದ ಮೆರೀನ್ ಎಂಜಿನಿಯರಿಂಗ್, ಕಡಲ ಕಾನೂನು, ಬಂದರು ಮತ್ತು ಟರ್ಮಿನಲ್ ನಿರ್ವಹಣೆ ಮತ್ತು ಕಡಲ ಮಾಹಿತಿ ತಂತ್ರಜ್ಞಾನದಂತಹ ವಿಷಯಗಳಲ್ಲಿ ಭವಿಷ್ಯಕ್ಕೆ ಸಿದ್ಧವಾದ ವೃತ್ತಿಪರರನ್ನು ಸೃಷ್ಟಿಸಲು ಈ ವಿಶ್ವವಿದ್ಯಾಲಯವು ನಿರ್ಣಾಯಕ ಪಾತ್ರ ವಹಿಸಲಿದೆ. ಇದು ಭಾರತದ ಕಡಲ ಪ್ರಗತಿಯ ಕೌಶಲ್ಯ ಅಭಿವೃದ್ಧಿ, ಸಂಶೋಧನೆ ಮತ್ತು ನೀತಿ ನಾವೀನ್ಯತೆ ಅಗತ್ಯಗಳನ್ನು ಕೂಡ ಪೂರೈಸುತ್ತದೆ ಎಂದು ಕ್ಯಾ. ಚೌಟ ಅವರು ಮನವಿಯಲ್ಲಿ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮೆರಿಟೈಮ್‌ ವಿವಿಯನ್ನು ಸ್ಥಾಪಿಸುವುದಕ್ಕೆ ಬೇಕಾಗುವ ಪೂರ್ವ ಸಿದ್ಧತೆ, ಸಾಧ್ಯಾ-ಸಾಧ್ಯತೆಗಳ ಬಗ್ಗೆ ಪರಿಶೀಲನೆ ನಡೆಸುವುದಕ್ಕೆ ಸಚಿವಾಲಯದಿಂದ ಪ್ರತ್ಯೇಕ ತಜ್ಞರ ಸಮಿತಿಯೊಂದನ್ನು ನೇಮಕಗೊಳಿಸಬೇಕು. ಈ ಸಮಿತಿ ಮೂಲಕ ರೂಪುರೇಷಗಳನ್ನು ಸಿದ್ಧಪಡಿಸಬೇಕು. ಜತೆಗೆ ನವ ಮಂಗಳೂರು ಪ್ರಾಧಿಕಾರದಿಂದ ಈ ಬಗ್ಗೆ ವಿಸೃತ್ತ ಯೋಜನಾ ವರದಿ(ಡಿಪಿಆರ್‌)ಯನ್ನು ಕೂಡ ಸಿದ್ಧಪಡಿಸಬೇಕು. ಇದಕ್ಕೆ ಸಂಬಂಧಪಟ್ಟ ಎಲ್ಲ ಇಲಾಖೆಗಳು, ಪಾಲುದಾರರು, ಸಚಿವಾಲಯಗಳ ಜತೆಗೂ ಸಮನ್ವಯತೆ ಕೈಗೊಂಡು ಸೂಕ್ತ ಸಲಹೆ ಪಡೆದುಕೊಳ್ಳಬೇಕು. ಆ ಮೂಲಕ ಮಂಗಳೂರಿನಲ್ಲಿ ಮೆರಿಟೈಮ್‌ ವಿವಿ ಸ್ಥಾಪನೆಗೆ ಬೇಕಾಗುವ ಎಲ್ಲ ಪೂರ್ವ ಸಿದ್ಧತೆ ಕೈಗೊಂಡು ಅದು ಕಾರ್ಯರೂಪಕ್ಕೆ ಬರುವುದಕ್ಕೆ ಸೂಕ್ತ ಕ್ರಮವನ್ನು ಸಚಿವಾಲಯ ಕೈಗೊಳ್ಳಬೇಕು ಎಂದು ಕ್ಯಾ. ಚೌಟ ಅವರು ಮನವಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Crime: ಕೋರ್ಟ್ ಆವರಣದಲ್ಲಿ ಮಚ್ಚಿನಿಂದ ಕಡಿದು ಮಾರಣಾಂತಿಕ ಹಲ್ಲೆ!