RCB: ಆರ್‌ಸಿಬಿ, ಡಿಎನ್‌ಎ ಹಾಗೂ ಕೆಎಸ್‌ಸಿಎ ವಿರುದ್ಧ ಕ್ರಿಮಿನಲ್‌ ಕೇಸ್‌, ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ ಸಂಪುಟ ನಿರ್ಧಾರ

Share the Article

RCB: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಐಪಿಎಲ್‌ ಟ್ರೋಫಿ ಗೆದ್ದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ 11 ಮಂದಿಯ ಸಾವು ಉಂಟಾಗಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕರ್ನಾಟಕ ಸಚಿವ ಸಂಪುಟ ನಿರ್ಧಾರ ಮಾಡಿದೆ.

ಇದಲ್ಲದೇ ಆರ್‌ಸಿಬಿ, ಇವೆಂಟ್‌ ಮ್ಯಾನೇಜ್‌ಮೆಂಟ್‌ ಕಂಪನಿ ಡಿಎನ್‌ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಎಸ್‌ಸಿಎ) (KSCA) ವಿರುದ್ಧ ಕ್ರಿಮಿನಲ್‌ ಕೇಸು ದಾಖಲು ಮಾಡಲು ಸಚಿವ ಸಂಪುಟ ತೀರ್ಮಾನ ಮಾಡಿದೆ. ಸಂಪುಟ ಸಭೆಯಲ್ಲಿ ಈ ನಿರ್ಧಾರ ಮಾಡಲಾಗಿದೆ.

ಆರ್‌ಸಿಬಿ, ಡಿಎನ್‌ಎ ಹಾಗೂ ಕೆಎಸ್‌ಸಿಎ ವಿರುದ್ಧ ಕ್ರಮಕ್ಕೆ ತೀರ್ಮಾನ ಮಾಡಲಾಗಿದೆ. ಪೊಲೀಸ್‌ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಕೂಡಾ ಶಿಫಾರಸು ಮಾಡಲಾಗಿದೆ.

ಈ ತೀರ್ಮಾನದಿಂದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ರಘುರಾಮ್ ಭಟ್, ಮಾಜಿ ಕಾರ್ಯದರ್ಶಿ ಎ.ಶಂಕರ್, ಮಾಜಿ ಖಜಾಂಚಿ ಜಯರಾಂ, ಆರ್ಸಿಬಿ ತಂಡದ ರಾಜೇಶ್ ಮೆನನ್, ಡಿಎನ್ಎ ನೆಟ್ವರ್ಕ್ ಲಿಮಿಟೆಡ್ ಎಂಡಿ ವೆಂಕಟ್ ವರ್ಧನ್ , ಡಿಎನ್ಎ ನೆಟ್ವರ್ಕ್ ಲಿಮಿಟೆಡ್ ಉಪಾಧ್ಯಕ್ಷ ಸುನೀಲ್ ಮಾಥೂರ್ ಇವರಿಗೆ ಸಂಕಷ್ಟ ಎದುರಾಗಲಿದೆ.

ಬೆಂಗಳೂರು ನಗರ ಮಾಜಿ ಪೊಲೀಸ್ ಕಮಿಷನರ್ ಬಿ.ದಯಾನಂದ್, ಐಪಿಎಸ್ ಅಧಿಕಾರಿಗಳಾದ ವಿಕಾಸ್ ಕುಮಾರ್ ವಿಕಾಸ್, ಶೇಖರ್, ಕಬ್ಬನ್ ಪಾರ್ಕ್ ಸಬ್ ಡಿವಿಷನ್ ಎಸಿಪಿ ಬಾಲಕೃಷ್ಣ, ಕಬ್ಬನ್ ಪಾರ್ಕ್‌ ಠಾಣೆಯ ಪಿಐ ಗಿರೀಶ್ ವಿರುದ್ಧವೂ ಪ್ರಕರಣ ದಾಖಲಾಗಲಿದೆ.

ಇದನ್ನೂ ಓದಿ: Gold Rate Today: ಚಿನ್ನದ ಬೆಲೆ ಒಂದೇ ಬಾರಿಗೆ 1000 ರೂಪಾಯಿ ಕಡಿಮೆ; ನಿಮ್ಮ ನಗರದಲ್ಲಿ ಇತ್ತೀಚಿನ ದರ ಎಷ್ಟಿದೆ ಗೊತ್ತಾ?

Comments are closed.