Yateendra: ಮೈಸೂರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್‌ಗಿಂತಲೂ ಸಿಎಂ ಸಿದ್ದರಾಮಯ್ಯ ಕೊಡುಗೆ ಹೆಚ್ಚು- ವಿವಾದ ಹುಟ್ಟಿಸಿದ ಯತೀಂದ್ರ ಹೇಳಿಕೆ

Share the Article

Yateendra: ‘ಮೈಸೂರು ನಗರದ ಅಭಿವೃದ್ಧಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರಿಗಿಂತಲೂ ಹೆಚ್ಚು ಅಥವಾ ಅಷ್ಟೇ ಪ್ರಮಾಣದಲ್ಲಿ ಅನುದಾನ ನೀಡಿರುವುದು ಸಿದ್ದರಾಮಯ್ಯ ಮಾತ್ರ’ ಎಂದು ವಿಧಾನಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಸಧ್ಯ ಇದು ರಾಜ್ಯಾಧ್ಯಂತ ತೀವ್ರ ವಿವಾದಕ್ಕೆ ಗುರಿಯಾಗಿದೆ.

ನಗರದಲ್ಲಿ ಶುಕ್ರವಾರ ತಮ್ಮ ನಿವಾಸದ ಬಳಿ ವಿಪಕ್ಷಗಳು ಸಾಧನಾ ಸಮಾವೇಶದ ಬಗ್ಗೆ ಟೀಕಿಸಿರುವ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿಯಾಗಿ ನಮ್ಮ ತಂದೆ ಮೈಸೂರಿಗೆ ಸಾಕಷ್ಟು ಅನುದಾನ ನೀಡಿ ಅಭಿವೃದ್ಧಿ ಮಾಡಿದ್ದಾರೆ. ಕೃಷ್ಣರಾಜ ಒಡೆಯರ್‌ ಅವರಿಗಿಂತ ಹೆಚ್ಚು ಅಭಿವೃದ್ಧಿ ಮಾಡಿದ್ದು ಸಿದ್ದರಾಮಯ್ಯ ಎಂದು ತಂದೆಯ ಕೆಲಸವನ್ನು ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರಿಗೆ ಹೋಲಿಸಿದರು.

ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿರುವ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್, ‘ಇಡಿ ವಿಶ್ವವೇ ಮೈಸೂರು ಸಂಸ್ಥಾನವನ್ನು ತಿರುಗಿ ನೋಡುವಂತೆ ಅಭಿವೃದ್ದಿಗೊಳಿಸಿ,ˌಜನಪರ ಆಡಳಿತವನ್ನು ನಡೆಸಿ,ˌಕನ್ನಡಿಗರ ಹೃದಯ ಸಿಂಹಾಸನದಲ್ಲಿ ಅಜರಾಮರರಾಗಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಕೊಡುಗೆಗಳು ಏನೆಂಬುದು ನಮ್ಮ ಕಣ್ಣ ಮುಂದೆಯೇ ಇವೆ’ ಎಂದು ತಿಳಿಸಿದ್ದಾರೆ.

ಸದ್ಯ ಈ ಹೇಳಿಕೆ ಭಾರೀ ಕೋಲಾಹಲ ಎಬ್ಬಿಸಿದ್ದು, ಮೈಸೂರಿನ ಸರ್ವತೋಮುಕ ಬೆಳವಣಿಗೆಗೆ ಬೃಹತ್‌ ಯೋಜನೆಗಳನ್ನು ಕೈಗೊಂಡಂತಹ ನಾಲ್ವಡಿ ಕೃಷ್ಣರಾಜ್‌ ಒಡೆಯರ್‌ಗೆ ರಾಜಕಾರಣಿಯನ್ನು ಹೋಲಿಸಿ ಮಾತನಾಡಿದ್ದು ತಪ್ಪು, ಇದು ಮಿತಿ ಮೀರಿದ ಹೇಳಿಕೆ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: Kannur: ಅತ್ಯಾಚಾರ ಕೊಲೆ ಆರೋಪಿ ಜೈಲಿನಿಂದ ಪರಾರಿ! ಬಳಿಕ ಸೆರೆ

Comments are closed.