Home News Udupi: ಮೀನುಗಾರರಿಗೆ ಅನೇಕ ಸೌಲಭ್ಯ, ಅರ್ಜಿ ಆಹ್ವಾನ!

Udupi: ಮೀನುಗಾರರಿಗೆ ಅನೇಕ ಸೌಲಭ್ಯ, ಅರ್ಜಿ ಆಹ್ವಾನ!

Hindu neighbor gifts plot of land

Hindu neighbour gifts land to Muslim journalist

Udupi: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ವಲಯ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಮೀನುಗಾರರಿಗೆ ಅನೇಕ ಸೌಲಭ್ಯಗಳಿದ್ದು ಅರ್ಜಿ ಆಹ್ವಾನಿಸಲಾಗಿದೆ.

ಉಚಿತವಾಗಿ ಮೀನುಗಾರಿಕಾ ಸಲಕರಣೆ ಕಿಟ್ಟು ವಿತರಣೆ ಯೋಜನೆ, ಮತ್ಸವಾಹಿನಿ ಯೋಜನೆಯಡಿ ಮೀನು ಮಾರಾಟಕ್ಕೆ ದ್ವಿಚಕ್ರ, ತ್ರಿಚಕ್ರ ಮತ್ತು ನಾಲ್ಕು ಚಕ್ರದ ವಾಹನ ಖರೀದಿಗೆ ಸಹಾಯ ನೀಡುವಂತೆ ನಿರ್ಧರಿಸಿದೆ.

ರಾಜ್ಯ ವಲಯ ಯೋಜನೆಯಡಿ ಕರಾವಳಿ ತಾಲೂಕುಗಳ ಅರ್ಹ ಫಲಾನುಭವಿಗಳಿಗೆ ಜೀವರಕ್ಷಕ ಸಾಧನಗಳನ್ನು, ಹೆಬ್ರಿ ಮತ್ತು ಕಾರ್ಕಳ ತಾಲೂಕುಗಳ ಫಲಾನುಭವಿಗಳಿಗೆ ಮೀನುಗಾರಿಕೆ/ ಮೀನು ಮಾರಾಟ ಸಾಮಗ್ರಿಗಳನ್ನು ಉಚಿತವಾಗಿ ವಿತರಿಸುವ ಯೋಜನೆಗಳನ್ನು ಪಾರದರ್ಶಕವಾಗಿ ಹಾಗೂ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಆಸಕ್ತ ಮೀನುಗಾರರಿಂದ ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವವರು ಸ. 20ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಇದನ್ನೂ ಓದಿ: Bantwala: ಬಂಟ್ವಾಳ: ಯುವ ವಕೀಲೆ ಸಾವು!