Nikhil Kumaraswamy : ಕರ್ನಾಟಕದ ಅಸಲಿ ಮುಖ್ಯಮಂತ್ರಿ ನೋಡಲು ಈ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ – ನಿಖಿಲ್ ಕುಮಾರಸ್ವಾಮಿ ಪೋಸ್ಟ್

Nikhil Kumaraswamy : ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಕುರ್ಚಿ ಕದನ ಕುರಿತು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ವ್ಯಂಗ್ಯವಾಡಿದ್ದು, ಕರ್ನಾಟಕದ ನಿಜವಾದ ಮುಖ್ಯಮಂತ್ರಿ ನೋಡಲು ಈ ಕ್ಯೂ ಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಿ ಎಂದು ಕಾಂಗ್ರೆಸ್ (Congress) ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ.

ಈ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು. ಕರ್ನಾಟಕವು ಕನ್ನಡಿಗ ಸಿಎಂಗೆ ಮತ ಹಾಕಿದೆ. ಆದರೆ, ಹರಿಯಾಣದ ಸೂಪರ್ ಸಿಎಂ ನಮ್ಮನ್ನು ಆಳುತ್ತಿದ್ದಾರೆ. ಅವರು ಈಗ ಮಂತ್ರಿಗಳೊಂದಿಗೆ ಮಾತ್ರವಲ್ಲ, ಸರ್ಕಾರದ ಅಧಿಕಾರಿಗಳೊಂದಿಗೆ ಸಭೆಗಳನ್ನೂ ನಡೆಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಅಂದಹಾಗೆ ನಿಖಿಲ್ ಶೇರ್ ಮಾಡಿಕೊಂಡಿರುವ ಕೋಡ್ ಸ್ಕ್ಯಾನ್ ಮಾಡಿದರೆ ರಣ್ ದೀಪರ್ ಸುರ್ಜೇವಾಲಾ ಅವರ ಫೇಸ್ ಬುಕ್ ಪೇಜ್ ಗೆ ಕೊಂಡೊಯ್ಯುತ್ತದೆ . ಈ ಮೂಲಕ ನಿಖಿಲ್ ಅವರು ರಣ್ ದೀಪ್ ಅವರೇ ಕರ್ನಾಟಕದ ನಿಜವಾದ ಸಿಎಂ ಎಂದು ಕಾಂಗ್ರೆಸ್ ಗೆ ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ: Police: ಭೀಕರ ಎನ್ಕೌಂಟರ್; ಪೊಲೀಸರ ಗುಂಡೇಟಿಗೆ ಮೂವರು ನಕ್ಸಲರು ಬಲಿ!
Comments are closed.