Temple Stampede: ಅವಸಾನೇಶ್ವರ ಮಹಾದೇವ ದೇವಾಲಯದಲ್ಲಿ ಕಾಲ್ತುಳಿತ: ಇಬ್ಬರು ಭಕ್ತರು ಸಾವು, ಹಲವರಿಗೆ ಗಾಯ

Share the Article

Temple Stampede: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿರುವ (Barabanki) ದೇವಾಲಯವೊಂದರಲ್ಲಿ ಕಾಲ್ತುಳಿತ (Stampede) ಸಂಭವಿಸಿ, ಇಬ್ಬರು ಭಕ್ತರು ಸಾವನ್ನಪ್ಪಿದ್ದು, 29 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಪವಿತ್ರ ಶ್ರಾವಣ ಮಾಸದ ಹಿನ್ನೆಲೆ ಇಂದು (ಸೋಮವಾರ) ಬಾರಾಬಂಕಿಯಲ್ಲಿರುವ ಪ್ರಾಚೀನ ಅವಸಾನೇಶ್ವರ ಮಹಾದೇವ ದೇವಾಲಯದಲ್ಲಿ (Awsaneshwar Mahadev Temple) ಭಕ್ತರು ದೇವರ ದರ್ಶನಕ್ಕೆ ಸಾಲುಗಟ್ಟಿ ನಿಂತಿದ್ದರು. ಈ ವೇಳೆ ಕೆಲ ಕೋತಿಗಳು ಓವರ್‌ಹೆಡ್ ವಿದ್ಯುತ್ ತಂತಿಗಳ ಮೇಲೆ ಹಾರಿವೆ. ಇದರಿಂದ ವಿದ್ಯುತ್‌ ತಂತಿ ತುಂಡಾಗಿ ತಗಡಿನ ಶೆಡ್‌ ಮೇಲೆ ಬಿದ್ದಿದ್ದು ದುರಂತಕ್ಕೆ ಕಾರಣವಾಗಿದೆ.

ಕೆಲವರಿಗೆ ನೇರವಾಗಿ ವಿದ್ಯುತ್‌ ಶಾಕ್‌ ತಗುಲಿದೆ. ಇದರಿಂದ ಇತರ ಭಕ್ತರಲ್ಲೂ ಆತಂಕ ಹೆಚ್ಚಾಗಿ ನೂಕು ನುಗ್ಗಲು ಶುರುವಾಗಿ, ಕಾಲ್ತುಳಿತ ಉಂಟಾಗಿದೆ. ಕಾಲ್ತುಳಿತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. 29 ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.

Comments are closed.