Python: ಬೃಹತ್ ಗಾತ್ರದ ಹೆಬ್ಬಾವು ಪತ್ತೆ – ಮರಳಿ ಕಾಡಿಗೆ ಬಿಟ್ಟ ಅರಣ್ಯ ಅಧಿಕಾರಿಗಳು

Python: ಮಳೆ ಜೋರಾದ ಹಿನ್ನೆಲೆ ಹಾವುಗಳು, ಮೊಸಳೆಗಳು ಎಲ್ಲೆಂದರಲ್ಲಿ ಕಾಣಿಸಿಕೊಳ್ಳುತ್ತಿವೆ. ಇದೀಗ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಕೂಡಿಗೆಯ ಜಮೀನೊಂದರಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದೆ,ಇಲ್ಲಿನ ಸೀಗೆ ಹೊಸೂರು ಗ್ರಾಮದ ಬಸವರಾಜು ಎಂಬುವವರ ಗದ್ದೆಯಲ್ಲಿ ಹಾವು ಕಾಣಿಸಿಕೊಂಡಿದ್ದು ಆತಂಕ ಸೃಷ್ಟಿಸಿದೆ.

ಕಳೆದೆರಡು ದಿನಗಳಿಂದ ಮಳೆಯ ನೀರು ಹರಿವು ನದಿ ತೊರೆಯಲ್ಲಿ ಹೆಚ್ಚಾಗಿರುವುದರಿಂದ ಕೊಚ್ಚಿ ಬಂದು ಗದ್ದೆಯಲ್ಲಿ ಆಶ್ರಯ ಪಡೆದಿದೆ ಎನ್ನಲಾಗಿದೆ. ಸುದ್ದಿ ತಿಳಿದು ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಹಾವನ್ನು ರಕ್ಷಿಸಿ ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟಿದ್ದಾರೆ.
Comments are closed.