BJP- JDS: ಯಶವಂತಪುರ ಬಿಜೆಪಿ ಅಭ್ಯರ್ಥಿ ಘೋಷಣೆ ಮಾಡಿದ BSY !! BJP- JDS ಮೈತ್ರಿಯಲ್ಲಿ ಅಲ್ಲೋಲ ಕಲ್ಲೋಲ

Share the Article

BJP-JDS: ಯಶವಂತಪುರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯನ್ನಾಗಿ ರೈತ ಮೋರ್ಚಾ ಉಪಾಧ್ಯಕ್ಷ ರುದ್ರೇಶ್ ಅವರ ಹೆಸರನ್ನು ಘೋಷಣೆ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಈ ಬೆನ್ನಲ್ಲೇ ಬಿಜೆಪಿ ಮಿತ್ರ ಪಕ್ಷ ಜೆಡಿಎಸ್ ಸಿಡಿದೆದ್ದಿದೆ.

ಹೌದು, ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ.ಸೋಮಶೇಖರ್ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಿದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಯಶವಂತಪುರ ಬಿಜೆಪಿ ಅಭ್ಯರ್ಥಿ ಎಂದು ಬಿಜೆಪಿ ರೈತ ಮೋರ್ಛಾ ರಾಜ್ಯ ಉಪಾಧ್ಯಕ್ಷ ರುದ್ರೇಶ್ ಅವರನ್ನು ಘೋಷಣೆ ಮಾಡಿದ್ದಾರೆ. ಇದು ಮಿತ್ರ ಪಕ್ಷ ಜೆಡಿಎಸ್ ಅಸಮಾಧಾನಕ್ಕೆ ಕಾರಣವಾಗಿದ್ದು, ಮೈತ್ರಿಯಲ್ಲಿ ಅಲ್ಲೋಕ ಕಲ್ಲೋಲ ಸೃಷ್ಟಿಸಿದೆ.

ಹೌದು, ಬಿಜೆಪಿ ರೈತ ಮೋರ್ಚಾದ ರಾಜ್ಯ ಉಪಾಧ್ಯಕ್ಷ ರುದ್ರೇಶ್ ರನ್ನು ಯಶವಂತಪುರ ಕ್ಷೇತ್ರದ ಮುಂಬರುವ ಬಿಜೆಪಿ ಅಭ್ಯರ್ಥಿಯಾಗಿ ಯಡಿಯೂರಪ್ಪ ಘೋಷಣೆ ಮಾಡಿದ್ದು ಮೈತ್ರಿ ಪಾಳಯದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿ ಮಾಡಿದೆ.ರುದ್ರೇಶ್ ಅವರ ಹುಟ್ಟುಹಬ್ಬದ ಹಿನ್ನಲೆ ಅವರ ನಿವಾಸಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ತೆರಳಿದ್ದರು.ಈ ಸಂದರ್ಭದಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ ಯಶವಂತಪುರ ಕ್ಷೇತ್ರದಿಂದ ಎಂ.ರುದ್ರೇಶ್ ಸ್ಪರ್ಧಿಸಲಿದ್ದಾರೆ ಎಂದು ಬಿ.ಎಸ್.ವೈ ಘೋಷಿಸಿದ್ದರು.

ಸಾಮಾಜಿಕ ಜಾಲತಾಣಗಳಲ್ಲಿ ಜೆಡಿಎಸ್ ಬೆಂಬಲಿತ ಪೇಜ್ ಗಳು ಬಿಎಸ್ ಯಡಿಯೂರಪ್ಪ ಹೇಳಿಕೆಯನ್ನು ಖಂಡಿಸಿದ್ದು, ಬಿಎಸ್ ವೈ ವಿರುದ್ಧ ಕಿಡಿಕಾರಿದ್ದಾರೆ. ಇದು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತ ಯಡಿಯೂರಪ್ನವರಪ ಪುತ್ರ, ಬಿಜೆಪಿ ರಾಜ್ಯಾದ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯಿಸಿ, ಯಾರು ಅಭ್ಯರ್ಥಿ ಆಗಬೇಕು ಎಂದು ರಾಜ್ಯದ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ಆಗಿ ರಾಷ್ಟ್ರೀಯ ಮಟ್ಟದಲ್ಲಿ ತೀರ್ಮಾನ ಅಗುತ್ತದೆ.ಯಶವಂತಪುರ ಮಾತ್ರ ಅಲ್ಲ. ಶಿಕಾರಿಪುರ ಸೇರಿದಂತೆ ಯಾವುದೇ ಕ್ಷೇತ್ರದ ಅಭ್ಯರ್ಥಿ ಯಾರು ಎಂದು ಕೋರ್ ಕಮಿಟಿಯಲ್ಲಿ ಚರ್ಚೆ ಆಗಿ ವರಿಷ್ಠರು ತೀರ್ಮಾನ ಮಾಡಬೇಕಾಗುತ್ತದೆ . ನಮ್ಮದು ರಾಷ್ಟ್ರೀಯ ಪಕ್ಷವಾಗಿದೆ. ರುದ್ರೇಶ್ ಮೇಲಿನ ಅಭಿಮಾನದಿಂದ ಯಡಿಯೂರಪ್ಪನವರು ಹೇಳಿರಬಹುದು. ಯಡಿಯೂರಪ್ಪನವರು ಹಿರಿಯರು, ಪಕ್ಷದ ಸಂಸದೀಯ ಮಂಡಳಿ ಸದಸ್ಯರು ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: Pune: ಆಫೀಸ್‌ ಮೀಟಿಂಗ್‌ನಿಂದ ಅರ್ಧಕ್ಕೇ ಹೊರಬಂದು ಕಟ್ಟಡದಿಂದ ಜಿಗಿದು ಟೆಕ್ಕಿ ಆತ್ಮ*ಹತ್ಯೆ

Comments are closed.