Prajwal Revanna : ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ: ಆ.1ಕ್ಕೆ ತೀರ್ಪು ಮುಂದೂಡಿದ ನ್ಯಾಯಾಲಯ!

prajwal Revanna: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ(Prajwal Revanna ) ಅತ್ಯಾಚಾರ, ಲೈಂಗಿಕ ದೌರ್ಜನ್ಯ(Sexual Harassment) ಆರೋಪಗಳ ಮೇಲಿನ ವಿಚಾರಣೆ ನಡೆಸಿ ನ್ಯಾಯಾಲಯ ಇಂದು ತೀರ್ಪನ್ನು ಆ.1 ಕ್ಕೆ ಮುಂದೂಡಿ ಆದೇಶ ನೀಡಿದೆ. 26 ಸಾಕ್ಷಿಗಳ ವಿಚಾರಣೆಯ ನಂತರ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (Special Court)ಈ ತೀರ್ಪನ್ನು ಮುಂದೂಡಿಕೆ ಮಾಡಿದೆ.

ಕೆ.ಆರ್. ನಗರ ಮೂಲದ ಮಹಿಳೆಯೊಬ್ಬರು ದಾಖಲಿಸಿದ್ದ ದೂರನ್ನಾಧರಿಸಿಸಿ ಸಿಐಡಿ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮನೆಗೆಲಸ ಮಾಡುತ್ತಿದ್ದ ಮಹಿಳೆ ದಾಖಲಿಸಿದ್ದ ದೂರನ್ನಾಧರಿಸಿ ವಿಚಾರಣೆ ನಡೆಸಲಾಗಿತ್ತು. ಸಂತ್ರಸ್ತೆಯ ಹೇಳಿಕೆ, ಸಾಂದರ್ಭಿಕ ಸಾಕ್ಷ್ಯ ಹಾಗೂ ಎಫ್‌ಎಸ್‌ಎಲ್ ವರದಿಯನ್ನೂ ಸಹ ನ್ಯಾಯಲಯ ಪರಿಗಣಿಸಿ ಅಂತಿಮ ತಿರ್ಪು ಕಾಯ್ದಿರಿಸಿತ್ತು.
Comments are closed.