Doddaballapura: ಅಂಬೇಡ್ಕರ್ ಕುರಿತು ವಿವಾದಾತ್ಮಕ ಹೇಳಿಕೆ – ನಟ ಪ್ರಥಮ್ ಮುಖಕ್ಕೆ ಮಸಿ ಬಳಿದ ಹೋರಾಟಗಾರರು!!

Doddaballapura: ನಟ ಪ್ರಥಮ್ ಮೇಲೆ ಹಲ್ಲೆ ಮತ್ತು ಜೀವ ಬೆದರಿಕೆ ಪ್ರಕರಣ ಸಂಬಂಧ ಘಟನೆ ನಡೆದು ಏಳು ದಿನಗಳ ಬಳಿಕ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಲು ಹೋದ ಸಂದರ್ಭದಲ್ಲಿ ಪ್ರಥಮ್ ಅವರ ಮುಖಕ್ಕೆ ಮಸಿ ಬಳಿಯಲು ಯತ್ನಿಸಲಾಗಿದೆ.

ಹೌದು, ಇಂದು (ಜುಲೈ 31) ಪ್ರಥಮ್ ಅವರು ಠಾಣೆಗೆ ಹಾಜರಾಗಿದ್ದರು. ವಿಚಾರಣೆ ಸಲುವಾಗಿ ಸ್ಥಳ ಮಹಜರಿಗೆ ಅವರನ್ನು ಕರೆದುಕೊಂಡು ಹೋಗಲಾಗಿತ್ತು. ಮಹಜರು ಮುಗಿಸಿ ಮತ್ತೆ ಠಾಣೆಗೆ ಕರೆತರಲಾಗಿತ್ತು. ಈ ವೇಳೆ .ಬಿ.ಆರ್. ಅಂಬೇಡ್ಕರ್ ಅವರ ಕುರಿತು ನಟ ಪ್ರಥಮ್ ನೀಡಿದ ಹೇಳಿಕೆಗೆ ಆಕ್ರೋಶಗೊಂಡ ಅಂಬೇಡ್ಕರ್ ಸೇನೆ ಸದಸ್ಯರು, ಪೊಲೀಸ್ ಠಾಣೆಯ ಮುಂದೆ ಬಂದು ಪ್ರತಿಭಟನೆ ನಡೆಸಿದರು. ಅಲ್ಲದೇ ನಟನ ಮುಖಕ್ಕೆ ಮಸಿ ಬಳಿಯಲು ಯತ್ನಿಸಲಾಯಿತು. ಕೂಡಲೇ ಪ್ರಥಮ್ ಅವರನ್ನು ರಕ್ಷಿಸಿದ ಪೊಲೀಸರು ಠಾಣೆಯೊಳಗೆ ಕರೆದೊಯ್ದರು.
ಇನ್ನು ಅಂಬೇಡ್ಕರ್ ಸಂಘದ ಸದಸ್ಯರ ಪ್ರಕಾರ, ನಟ ಪ್ರಥಮ್ ಸಂವಿಧಾನ ಹಾಗೂ ಸಮಾಜದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. ‘ಆತನಿಗೆ ಸಂವಿಧಾನದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಲು ಏನು ಹಕ್ಕಿದೆ ‘ ಎಂದು ಅಕ್ರೋಶ ವ್ಯಕ್ತಪಡಿಸಿದರು.
Comments are closed.