LPG ಸಿಲಿಂಡರ್ ಬೆಲೆಯಲ್ಲಿ 33.50 ರೂ. ಇಳಿಕೆ !!

Share the Article

LPG: ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಬೆಲೆಯಲ್ಲಿ ಸುಮಾರು 33.50 ರೂ. ಇಳಿಕೆ ಮಾಡಿದ್ದು, ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬಂದಿವೆ.

ಹೌದು, ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಗಳನ್ನು ಪರಿಷ್ಕರಣೆ ಮಾಡಿದೆ. 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ದರವನ್ನು ನಾಳೆಯಿಂದ ಅಂದರೆ ಆಗಸ್ಟ್‌ 1 ರಿಂದ ಜಾರಿಗೆ ಬರುವಂತೆ 33.50 ರೂ.ಗಳಷ್ಟು ಕಡಿಮೆ ಮಾಡಲಾಗಿದೆ.

ರಾಷ್ಟ್ರ ರಾಜಧಾನಿಯಲ್ಲಿ, 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಬೆಲೆ ಈಗ 1,631.50 ರೂ. ಆಗಿರುತ್ತದೆ. ಆದರೆ, 14.2 ಕೆಜಿ ಗೃಹಬಳಕೆ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

Comments are closed.