Home News Dharmasthala Case: ಪ್ರಣಬ್‌ ಮೊಹಂತಿ ಕೇಂದ್ರ ಸೇವೆಗೆ ಹೋಗ್ತಾರಾ? ಗೃಹ ಸಚಿವ ಜಿ.ಪರಮೇಶ್ವರ್‌ರಿಂದ ಸ್ಪಷ್ಟನೆ

Dharmasthala Case: ಪ್ರಣಬ್‌ ಮೊಹಂತಿ ಕೇಂದ್ರ ಸೇವೆಗೆ ಹೋಗ್ತಾರಾ? ಗೃಹ ಸಚಿವ ಜಿ.ಪರಮೇಶ್ವರ್‌ರಿಂದ ಸ್ಪಷ್ಟನೆ

Hindu neighbor gifts plot of land

Hindu neighbour gifts land to Muslim journalist

Pranab Mohanty: ಧರ್ಮಸ್ಥಳ ತಲೆ ಬುರುಡೆ ರಹಸ್ಯ ಪ್ರಕರಣಕ್ಕೆ ಕುರಿತಂತೆ ಎಸ್‌ಐಟಿ ತಂಡ ಧರ್ಮಸ್ಥಳದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಈ ಮಧ್ಯೆ ಐಪಿಎಸ್‌ ಅಧಿಕಾರಿ ಪ್ರಣಬ್‌ ಮೊಹಂತಿ ಅವರು ಕೇಂದ್ರ ಸೇವೆಗೆ ಆಯ್ಕೆಯಾಗಿದ್ದು, ಅವರು ಅಲ್ಲಿಗೆ ಹೋಗುತ್ತಾರಾ? ಎನ್ನುವ ಪ್ರಶ್ನೆಗೆ ವಿಧಾನಸೌಧದಲ್ಲಿ ಇಂದು ಪರಮೇಶ್ವರ್‌ ಅವರು ಉತ್ತರ ನೀಡಿದ್ದಾರೆ.

ಮಾಧ್ಯಮಗಳಿಂದ ಈ ಗೊಂದಲ ಸೃಷ್ಟಿಯಾಗಿದೆ. ಕೇಂದ್ರ ಸೇವೆಗೆ ಅರ್ಹತೆ ಪಡೆದ ಡಿಜಿಪಿಗಳ ಅಧಿಕಾರಿಗಳ ಪಟ್ಟಿಯಲ್ಲಿ ಪ್ರಣಬ್‌ ಮೊಹಂತಿ ಅರ್ಹತೆ ಪಡೆದಿರುವುದು ಕರ್ನಾಟಕಕ್ಕೆ (Karnataka) ಹೆಮ್ಮೆ. ಕೇಂದ್ರ ಸರ್ಕಾರ ಕೇಂದ್ರ ಸೇವೆಗೆ ಅರ್ಹತೆ ಪಡೆಯುವ ಐಪಿಎಸ್‌ ಅಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತದೆ. ಹಿರಿತನ, ತನಿಖಾ ಸಾಮರ್ಥ್ಯ, ಅನುಭವಗಳನ್ನು ಪರಿಗಣಿಸಿ ಕೇಂದ್ರ ಸರ್ಕಾರ ಈ ಪಟ್ಟಿಗೆ ಇಡೀ ದೇಶದ ಐಪಿಎಸ್‌ ಅಧಿಕಾರಿಗಳ ಹೆಸರನ್ನು ಸೇರಿಸಿ ಬಿಡುಗಡೆ ಮಾಡುತ್ತದೆ ಎಂದರು.

ಈ ಪಟ್ಟಿಯಲ್ಲಿ ಬಂದಿದೆ ಎಂಬ ಕಾರಣಕ್ಕೆ ತಕ್ಷಣವೇ ಕೇಂದ್ರ ಸರ್ಕಾರ ಹುದ್ದೆ ನೀಡುವುದಿಲ್ಲ. ಕೇಂದ್ರ ಸರ್ಕಾರ ಪ್ರಣಬ್‌ ಮೊಹಂತಿ ಅವರನ್ನು ಕೇಂದ್ರ ಸೇವೆಗೆ ಕಳುಹಿಸಿಕೊಡಿ ಎಂದು ನಮಗೆ ಪತ್ರ ಬರೆಯಬೇಕು. ಅವರನ್ನು ಕಳುಹಿಸುವುದು ಬಿಡುವುದು ನಮ್ಮ ಆಯ್ಕೆ. ಪಟ್ಟಿಯಲ್ಲಿ ಹೆಸರು ಬಂದ ಮಾತ್ರಕ್ಕೆ ಕಳುಹಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ: Dharmasthala Case: ಧರ್ಮಸ್ಥಳ ಕೇಸ್‌ ವಿಚಾರದಲ್ಲಿ ಸುಳ್ಳು ಸುದ್ದಿ ಹರಡಿದರೆ ಕ್ರಮ: ಗೃಹ ಸಚಿವರ ಮಹತ್ವದ ಸಭೆ