Sandalwood Ramya: ನಟಿ ರಮ್ಯಾಗೆ ಅಶ್ಲೀಲ ಕಮೆಂಟ್ ಮಾಡಿದ ದರ್ಶನ್ ಫ್ಯಾನ್ಸ್ ಪ್ರಕರಣ: ಮೂವರು ವಶಕ್ಕೆ

Sandalwood Ramya: ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾಗೆ ಅಶ್ಲೀಲ ಪದಗಳಿಂದ ನಿಂದನೆ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸೈಬರ್ ಕ್ರೈಮ್ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಿದ್ದಾರೆ. ಅಶ್ಲೀಲ ಪದ ಬಳಸಿ ಕಮೆಂಟ್ ಮಾಡಿದ ಮೂವರನ್ನು ಇದೀಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಐಡಿ ಪರಿಶೀಲನೆ ಮಾಡಿ, ಗುರುತು ವಿಳಾಸ ಪತ್ತೆ ಮಾಡಲಾಗಿದ್ದು, ಆಗಸ್ಟ್ 1 ರಂದು ವಶಕ್ಕೆ ಪಡೆದು ವಿಚಾರಣೆ ಕೈಗೆತ್ತಿಕೊಂಡಿದ್ದಾರೆ.
ಸೈಬರ್ ಕ್ರೈಂ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲು ಆಗಿದೆ. ಪ್ರಮೋದ ಗೌಡ ಎಂಬ ವ್ಯಕ್ತಿ ಸೇರಿ 43 ಅಕೌಂಟ್ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿತ್ತು. ಕೇಂದ್ರ ವಿಭಾಗದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐಟಿ ಆಕ್ಟ್ 67, 66 ಹಾಗೂ ಬಿಎನ್ಎಸ್ 351(2), 351(3), 352, 75(1)(4), 79 ಅಡಿ ಪ್ರಕರಣ ದಾಖಲು ಆಗಿದೆ.
Comments are closed.