Uppinangady: ಉಪ್ಪಿನಂಗಡಿ: ವಿವಾಹಿತ ಮಹಿಳೆ ನಾಪತ್ತೆ

Uppinangady : ನೆಕ್ಕಿಲಾಡಿ ಗ್ರಾಮದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಹಾವೇರಿ ಮೂಲದ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಸಂಕ್ರಿಕೊಪ್ಪ ನಿವಾಸಿ ಭೀಮಪ್ಪ ಎಂಬವರ ಪತ್ನಿ ರೇಷ್ಮಾ ಮಲಲಿ ಭಜಂತ್ರಿ (26) ನಾಪತ್ತೆಯಾದ ಮಹಿಳೆಯಾಗಿದ್ದು, ಆಕೆ ಪತಿಯೊಂದಿಗೆ 34ನೇ ನೆಕ್ಕಿಲಾಡಿ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು.
ಭೀಮಪ್ಪ ನಾಗರ ಪಂಚಮಿಯ ಹಬ್ಬಕ್ಕಾಗಿ ಜು.26ರಂದು ಹಾವೇರಿಗೆ ಹೋಗಿ ಜು.30ರಂದು ಹಿಂತಿರುಗಿ ಬರುವಾಗ ಮನೆಯಲ್ಲಿದ್ದ ಪತ್ನಿ ನಾಪತ್ತೆಯಾಗಿದ್ದರು. ಈ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ಎಸ್ಐಟಿ ಅಧಿಕಾರಿ ಮಂಜುನಾಥ ಗೌಡ ಭೀಮಗೆ ದೂರು ಹಿಂಪಡೆಯುವಂತೆ ಒತ್ತಡ? ಶಾಕಿಂಗ್ ವರದಿ ಮಾಡಿದ ಪತ್ರಿಕೆ
Comments are closed.