Malegaon case : ಸುಳ್ಳು ಹೇಳಿ RSS ಮುಖ್ಯಸ್ಥ ಮೋಹನ್ ಭಾಗವತ್ ಬಂಧಿಸಲು ಪಿತೂರಿ ನಡೆದಿತ್ತು – ಮಾಜಿ ಪೊಲೀಸ್ ಅಧಿಕಾರಿ ಸ್ಫೋಟಕ ಹೇಳಿಕೆ!!

Malegaon case: 2008ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಇದೀಗ ಏಳು ಆರೋಪಿಗಳ ಖುಲಾಸೆ ಮಾಡಲಾಗಿದೆ. ಈ ಬೆನ್ನಲ್ಲೇ ಪ್ರಕರಣದ ಮಾಜಿ ತನಿಖಾಧಿಕಾರಿಯೋರ್ವರು ಸ್ಪೋಟಕ ಹೇಳಿಕೆಯನ್ನು ನೀಡಿದ್ದು, ತನಿಖೆಯ ಸಂದರ್ಭದಲ್ಲಿ RSS ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಬಂಧಿಸುವಂತೆ ಮಹಾರಾಷ್ಟ್ರ ಭಯೋತ್ಪಾದನೆ ನಿಗ್ರಹ ದಳ(ಎಟಿಎಸ್)ಕ್ಕೆ ಆದೇಶಿಸಲಾಗಿತ್ತು ಎಂದು ಆರೋಪಿಸಿದ್ದಾರೆ.

ಹೌದು, 2008 ರಲ್ಲಿ ನಡೆದ ಮಾಲೆಗಾಂವ್ ಸ್ಫೋಟ (Malegaon Blast) ಪ್ರಕರಣಕ್ಕೆ ಸಂಬಂಧಿಸಿದಂತೆ ʼಕೇಸರಿ ಭಯೋತ್ಪಾದನೆʼ ಎಂಬ ನಿರೂಪಣೆಯನ್ನು ತರುವ ಸಲುವಾಗಿ ಆರ್‌ಎಸ್‌ಎಸ್ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಅವರ ಮೇಲೆ ತಪ್ಪು ಆರೋಪಗಳನ್ನು ಹಾಕಿ ಬಂಧಿಸಲು ನಿರ್ದೇಶಿಸಲಾಗಿತ್ತು ಎಂದು ಮಹಾರಾಷ್ಟ್ರದ (Maharashtra) ನಿವೃತ್ತ ಎಟಿಎಸ್ ಅಧಿಕಾರಿಯೊಬ್ಬರು ಸ್ಫೋಟಕ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.
ಈ ಕುರಿತಾಗಿ ಮಾತನಾಡಿದ ಅವರು ಘಟನೆ ನಡೆದಾಗ ಎಟಿಎಸ್ ಈ ಪ್ರಕರಣದ ತನಿಖೆ ನಡೆಸಿತ್ತು. ನಂತರದ ದಿನಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ತನಿಖೆ ಆರಂಭಿಸಿತು. ನಾನೂ ಈ ಪ್ರಕರಣದ ತನಿಖಾ ತಂಡದಲ್ಲಿದ್ದೆ. ‘ಹೋಗಿ ಮೋಹನ್ ಭಾಗವತ್ ಅವರನ್ನು ಬಂಧಿಸಿ ಕರೆತನ್ನಿ’ ಎಂದು ಮೇಲಿನಿಂದ ಆದೇಶ ಬಂತು. ಎಟಿಎಸ್ ಯಾವ ರೀತಿಯಲ್ಲಿ ತನಿಖೆ ನಡೆಸಿತು ಮತ್ತು ಏಕೆ ಎಂಬುದನ್ನು ನಾನು ಹೇಳಲಾರೆ, ಆದರೆ ರಾಮ್ ಕಾಲಸಂಗ್ರ, ಸಂದೀಪ್ ದಾಂಗೆ, ದಿಲೀಪ್ ಪಾಟೀದಾರ್ ಮತ್ತು ಮೋಹನ ಭಾಗವತ್ ಅವರನ್ನು ಬಂಧಿಸಿ ಕರೆತರುವಂತೆ ಆದೇಶಿಸಲಾಗಿತ್ತು. ಈ ಪ್ರಕರಣವನ್ನು ಕೇಸರಿ ಭಯೋತ್ಪಾದನೆ ಪ್ರಕರಣವನ್ನಾಗಿ ಬಿಂಬಿಸಲು ಭಾಗವತ್ ಅವರನ್ನು ಆರೋಪಿಯನ್ನಾಗಿ ಸೇರಿಸಲು ಉದ್ದೇಶಿಸಲಾಗಿತ್ತು ಎಂದು ಅವರು ತಿಳಿಸಿದ್ದಾರೆ.
ಅಲ್ಲದೆ ‘ಮೋಹನ ಬಾಗವತ್ ಅವರನ್ನು ಬಂಧಿಸಿ ಕರೆತರುವುದು ನನ್ನ ಸಾಮರ್ಥ್ಯಕ್ಕೂ ಮೀರಿದ್ದಾಗಿತ್ತು. ನಾನು ಆ ಆದೇಶವನ್ನು ಪಾಲಿಸಲಿಲ್ಲ. ಅದಕ್ಕಾಗಿ ನನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಯಿತು. ನನ್ನ 40 ವರ್ಷದ ವೃತ್ತಿ ಬದುಕನ್ನೇ ನಾಶ ಮಾಡಿದರು. ಇಷ್ಟು ಮಾತ್ರವಲ್ಲದೇ ಸತ್ತವರನ್ನು ಜೀವಂತವಾಗಿ ತೋರಿಸುವಂತಹ ಚಾರ್ಜ್‌ಶೀಟ್ ಸಲ್ಲಿಸಲು ಪರಮವೀರ್ ಸಿಂಗ್ ನನಗೆ ಹೇಳಿದ್ದರು. ಆದರೆ ನಾನು ಅದನ್ನು ನಿರಾಕರಿಸಿದ್ದೆ. ಇದಕ್ಕೆ ಪ್ರತಿಯಾಗಿ ಅವರು ನನ್ನನ್ನು ಸುಳ್ಳು ಪ್ರಕರಣವೊಂದರಲ್ಲಿ ಸಿಲುಕಿಸಿ ಹಾಕಿದರು. ನಾನು ತಪ್ಪು ಕೆಲಸದಲ್ಲಿ ತೊಡಗಿಸಿಕೊಳ್ಳಲು ಬಯಸದ ಕಾರಣ ನಾನು ಅದನ್ನು ಪ್ರತಿಭಟಿಸಿದೆ. ಆದರೆ ಅದಕ್ಕೆ ಪ್ರತಿಯಾಗಿ ನನ್ನ ವಿರುದ್ಧ ಕಟ್ಟು ಕಥೆಯ ಪ್ರಕರಣವನ್ನು ದಾಖಲಿಸಲಾಯಿತು. ಆದರೆ ಬಳಿಕ ಆ ಎಲ್ಲಾ ಪ್ರಕರಣಗಳಿಂದ ನನ್ನನ್ನು ಖುಲಾಸೆಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: Rakshak Bullet: ಬೇಕಾಬಿಟ್ಟಿ ಕಾರು ಓಡಿಸಿ ಬೈಕ್‌ಗೆ ಗುದ್ದಿದ ರಕ್ಷಕ್ ಬುಲೆಟ್ – ಕಾಲು ಮುರಿತ!
Comments are closed.