Belagavi: ಮುಖ್ಯ ಶಿಕ್ಷಕನ ವರ್ಗಾವಣೆ ಮಾಡಿಸಲು ಶಾಲಾ ನೀರಿನ ಟ್ಯಾಂಕ್ಗೆ ವಿಷ: ಶ್ರೀರಾಮಸೇನೆ ಅಧ್ಯಕ್ಷ ಬಂಧನ

Belagavi: ಸರಕಾರಿ ಶಾಲೆಯ ಕುಡಿಯುವ ನೀರಿನ ಟ್ಯಾಂಕ್ಗೆ ವಿಷ ಬೆರೆಸಿದ್ದ ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಬೇರೆ ಧರ್ಮಕ್ಕೆ ಸೇರಿದ ಮುಖ್ಯ ಶಿಕ್ಷಕನನ್ನು ವರ್ಗಾವಣೆ ಮಾಡಬೇಕೆನ್ನುವ ಉದ್ದೇಶದಿಂದ ಈ ಕೃತ್ಯ ಮಾಡಿರುವುದಾಗಿ ತನಿಖೆಯಲ್ಲಿ ಬಹಿರಂಗಗೊಂಡಿದೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ 15 ದಿನಗಳ ಹಿಂದೆ ವಿಷಯುಕ್ತ ನೀರು ಸೇವಿಸಿ 11 ಮಕ್ಕಳು ದಿಢೀರನೆ ಅಸ್ವಸ್ಥರಾಗಿದ್ದರು.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶ್ರೀರಾಮ ಸೇನೆಯ ಸವದತ್ತಿ ತಾಲೂಕು ಅಧ್ಯಕ್ಷ ಹೂಲಿಕಟ್ಟಿ ಗ್ರಾಮದ ಸಾಗರ ಪಾಟೀಲ, ಕೃಷ್ಣ ಯಾದವ, ನಾಗನಗೌಡ ಪಾಟೀಲ ಎಂಬುವವರನ್ನು ಬಂಧನ ಮಾಡಲಾಗಿದೆ. ಜಿಲ್ಲಾ ಪೊಲೀಸ್ ಅಧೀಕ್ಷಕರು ಈ ಮಾಹಿತಿಯನ್ನು ಸುದ್ದಿಗೋಷ್ಠಿಯಲ್ಲಿ ನೀಡಿದ್ದಾರೆ.
ವಿಷ ಮಿಶ್ರಿತ ನೀರು ಸೇವಿಸಿ ಮಕ್ಕಳು ಮೃತಪಟ್ಟರೆ ಅದಕ್ಕೆ ಮುಖ್ಯ ಶಿಕ್ಷಕನನ್ನು ಹೊಣೆ ಮಾಡಿ ಬೇರೆ ಕಡೆ ವರ್ಗಾವಣೆ ಮಾಡುತ್ತಾರೆ ಎಂದು ಸಂಚು ರೂಪಿಸಿದ್ದರು ಎಂದು ತಿಳಿಸಲಾಗಿದೆ. “ನೀರಿನ ಟ್ಯಾಂಕ್ ಒಳಗೆ ವಿಷ ಹಾಕುವಂತೆ ನಾಗನಗೌಡ ಪಾಟೀಲ್ ಮತ್ತು ಸಾಗರ್ ಪಾಟೀಲ್ ನನಗೆ ಹೇಳಿದ್ದರು. ವಿಷ ಹಾಕದಿದ್ದರೇ ನಾನು (ಕೃಷ್ಣ) ಅನ್ಯ ಜಾತಿ ಹುಡುಗಿಯನ್ನು ಪ್ರೀತಿ ಮಾಡುವ ವಿಚಾರ ಊರಲ್ಲಿ ಹೇಳುತ್ತೇವೆ ಅಂತ ಬ್ಲ್ಯಾಕ್ಮೇಲ್ ಮಾಡಿದ್ದರಿಂದ ಭಯಗೊಂಡು ಬಾಲಕನಿಗೆ ಚಾಕಲೇಟ್ ಮತ್ತು ಐದನೂರು ರೂಪಾಯಿ ನೀಡಿ ಪುಸಲಾಯಿಸಿ ವಿಷ ಹಾಕಿಸಿದ್ದೆ” ಅಂತ ತಪ್ಪೊಪ್ಪಿಕೊಂಡಿದ್ದಾನೆ.
ಬಾಲಕ ಅಂದು ಟ್ಯಾಂಕ್ಗೆ ವಿಷ ಹಾಕುವಾಗ ಅರ್ಧದಷ್ಟು ವಿಷ ಹೊರಗೆ ಬಿದ್ದಿದ್ದು ಅನುಕೂಲವಾಗಿದ್ದು, ಅದು ಕೂಡಾ ಮಕ್ಕಳು ನೀರು ಕುಡಿಯದೇ ಬಾಯಲ್ಲಿ ಹಾಕುತ್ತಿದ್ದಂತೆ ಡೌಟ್ ಬಂದು ಉಗುಳಿದ್ದರಿಂದ ಬದುಕುಳಿದಿದೆ. ಆರೋಪಿಗಳಾದ ಶ್ರೀರಾಮ ಸೇನೆಯ ಸವದತ್ತಿ ತಾಲೂಕು ಅಧ್ಯಕ್ಷ ಹೂಲಿಕಟ್ಟಿ ಗ್ರಾಮದ ಸಾಗರ ಪಾಟೀಲ, ಕೃಷ್ಣಾ ಮಾದರ್, ನಾಗನಗೌಡ ಎಂಬವರನ್ನು ಪೊಲೀಸರು ಬಂಧನ ಮಾಡಿ ಹಿಂಡಲಗಾ ಜೈಲಿಗೆ ಹಾಕಿದ್ದಾರೆ.
Comments are closed.