Hubballi: ಇಂದು ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಆರೋಪಿ ಫಯಾಜ್ ಜಾಮೀನು ಆದೇಶ ಪ್ರಕಟ

Hubballi: ಹುಬ್ಬಳ್ಳಿಯಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಬರ್ಬರ ಕೊಲೆ ಪ್ರಕರಣದ ಆರೋಪಿ ಫಯಾಜ್ ಜಾಮೀನು ಅರ್ಜಿಯ ಕುರಿತು ಇಂದು ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆದೇಶ ಹೊರಡಿಸಿದೆ. ಜಾಮೀನು ಅರ್ಜಿ ವಿಚಾರಣೆ ಮಾಡಿರುವ ನ್ಯಾಯಾಧೀಶರು ಇಂದು ತೀರ್ಪು ಪ್ರಕಟ ಮಾಡಲಿದ್ದಾರೆ.

ಎಪ್ರಿಲ್ 18,2024 ರಂದು ಹುಬ್ಬಳ್ಳಿಯ ಬಿವಿಎಂ ಕಾಲೇಜಿನಲ್ಲಿ ನೇಹಾ ಹಿರೇಮಠ ಕೊಲೆ ಮಾಡಲಾಗಿತ್ತು. ಕಾಲೇಜು ಕ್ಯಾಂಪಸ್‌ನಲ್ಲಿ ನೇಹಾ ಹಿರೇಮಠ ಅವರನ್ನು ಕೊಲೆ ಮಾಡಿದ್ದು, ಇದೀಗ ನಟ ದರ್ಶನ್ ಅವರಿಗೆ ಜಾಮೀನು ನೀಡಿದಂತೆ ನನಗೂ ಜಾಮೀನು ನೀಡಿ ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾನೆ.
Comments are closed.